ಸುಂಟಿಕೊಪ್ಪ ಅ.30 : ಸುಂಟಿಕೊಪ್ಪ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ ನ.1 ರಂದು ನಡೆಯಲಿದೆ.
ಅಂದು ಬೆಳಗ್ಗೆ 9 ಗಂಟೆಗೆ ನಗರದ ಹೃದಯ ಭಾಗದಲ್ಲಿರುವ ಕನ್ನಡ ವೃತ್ತದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಂಟಿಕೊಪ್ಪ ಗೌಡ ಸಂಘದ ಅಧ್ಯಕ್ಷ ಯಂಕನ ಉಲ್ಲಾಸ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ಹೋಬಳಿ ಘಟಕದ ಅಧ್ಯಕ್ಷ ಪಿ.ಎಫ್.ಸಬಾಸ್ಟೀನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ವೇಳೆ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿರುವ ಸಂತ ಮೇರಿ ಆಂಗ್ಲ ಮಾದ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸೆಲ್ವರಾಜ್ ಅವರಿಗೆ ಗೌರವ ಸಮರ್ಪಣೆ ನಡೆಯಲಿದೆ.
ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಉಪಾಧ್ಯಕ್ಷೆ ಶಿವಮ್ಮ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಕಸಾಪ ಕಾರ್ಯದರ್ಶಿ ಕೆ.ಎಸ್.ಅನಿಲ್ ತಿಳಿಸಿದ್ದಾರೆ.









