ಮಡಿಕೇರಿ ಅ.30 : ಚೇರಳ ಗೌಡ ಸಂಘದ 15ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಐಯಂಡ್ರ ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ಸಭೆ ವೇಳೆಗೆ ನೂತನ ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ನಿರ್ಧಾರ ಕೈಗೊಳ್ಳಲಾಯಿತು.
ಸಂಘದ ನೂತನ ಕಟ್ಟಡದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಘವಯ್ಯ ಅವರು ಸಂಘದಲ್ಲಿ ಕಡಿಮೆ ಸಂಖ್ಯೆಯ ಸದಸ್ಯರಿದ್ದರೂ ಎಲ್ಲರ ಸಹಕಾರದಿಂದ 15 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಲಾಗಿದೆ. ಅಲ್ಲದೆ ನೂತನ ಕಟ್ಟಡವನ್ನು ನಿರ್ಮಿಸಲಾಗುತ್ತಿದ್ದು, ಮೇಲಿನ ಅಂತಸ್ತಿನ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆ ಇಂದು ಇದೇ ಕಟ್ಟಡದಲ್ಲಿ ಮಹಾಸಭೆ ನಡೆಸಲು ಸಾಧ್ಯವಾಗಿದೆ. ಇದು ಹೆಮ್ಮೆಯ ವಿಚಾರವೆಂದು ಹರ್ಷ ವ್ಯಕ್ತಪಡಿಸಿದರು.
ಸಂಘದ ಸದಸ್ಯರಿಗೆ ಸಮಾಜದ ಸಭಾಂಗಣವನ್ನು ಸಭೆ, ಸಮಾರಂಭಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುವುದು. ಉಳಿದಿರುವ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಸರ್ವರು ಸಹಕಾರ ನೀಡಬೇಕೆಂದು ರಾಘವಯ್ಯ ಮನವಿ ಮಾಡಿದರು.
ಕಾರ್ಯದರ್ಶಿ ಆಜೀರ ಧನುಂಜಯ 2022-23 ನೇ ಸಾಲಿನ ವರದಿ ವಾಚಿಸಿದರು. ಉಪ ಕೋಶಾಧಿಕಾರಿ ಪೇರಿಯನ ಉದಯ ಲೆಕ್ಕಪತ್ರ ಮಂಡಿಸಿದರು.
ಮರದಾಳು ದುವಿನ್ ಹಾಗೂ ಸಂಗಡಿಗರು ಪ್ರಾರ್ಥಿಸಿ, ಸಂಘದ ಖಜಾಂಚಿ ಮುಕ್ಕಾಟಿ ಪಳಂಗಪ್ಪ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಪೇರಿಯನ ಪೂಣಚ್ಚ ವಂದಿಸಿದರು.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*