ಮಡಿಕೇರಿ ಅ.31 : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಯಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ kacdc.karnataka.gov.in ರ ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ನ.30 ಕೊನೆಯ ದಿನವಾಗಿದೆ.
ಅರಿವು ಶೈಕ್ಷಣಿಕ ಸಾಲ ಯೋಜನೆ:-ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿ ಪರ ಕೋರ್ಸ್‍ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ಬಿಯುಎಂಎಸ್, ಬಿಡಿಎಸ್. ಬಿಎಎಂಎಸ್., ಬಿಹೆಚ್‍ಎಂಎಸ್, ಎಂಬಿಎ, ಎಂಟೆಕ್, ಎಂಇ, ಎಂಡಿ, ಪಿಎಚ್‍ಡಿ, ಬಿಸಿಎ/ಎಂಸಿಎ, ಎಂಎಸ್ ಅಗ್ರಿಕಲ್ಚರ್, ಬಿಎಸ್ಸಿ ನರ್ಸಿಂಗ್, ಬಿಫಾರಂ/ಎಂಫಾರಂ, ಬಿಎಸ್ಸಿ. ಪ್ಯಾರಾ ಮೆಡಿಕಲ್, ಬಿಎಸ್ಸಿ. ಬಯೋಟೆಕ್ನಾಲಜಿ, ಬಿಟೆಕ್, ಬಿಪಿಟಿ., ಬಿವಿಎಸ್‍ಸಿ./ಎಂವಿ, ಬಿಎನ್‍ಎಂ, ಬಿಎಚ್‍ಎಂ, ಎಂಡಿಎಸ್, ಎಂಎಸ್‍ಡಬ್ಲ್ಯೂ, ಎಲ್‍ಎಲ್‍ಎಂ, ಎಂಎಫ್‍ಎ, ಎಂಎಸ್ಸಿ. ಬಯೋಟೆಕ್ನಾಲಜಿ, ಎಂಎಸ್ಸಿ. ಎಜಿ, ಮುಂತಾದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ. 1 ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ. 4 ಲಕ್ಷಗಳಿಂದ ರೂ. 5 ಲಕ್ಷಗಳವರೆಗೆ ವಾರ್ಷಿಕ ಶೇ.2ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.
ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷಗಳ ಮಿತಿಯೊಳಗಿರಬೇಕು. ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು).
ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5 ಮೀಸಲಾತಿ ಇರಿಸಿದೆ. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.
ಈ ಯೋಜನೆಯ ಮಾರ್ಗಸೂಚಿ ಹಾಗೂ ಅರ್ಜಿಯನ್ನು ಈ ಕಿಖ ಕೋಡ್ ಅನ್ನು ಗೂಗಲ್‍ನಲ್ಲಿ ಸ್ಕ್ಯಾನ್ ಮಾಡಿ ಸಲ್ಲಿಸಬಹುದಾಗಿದೆ. ನಿಗಮದ ಸಹಾಯವಾಣಿ 9448451111 (ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದು). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕರ ಕಚೇರಿ ವಿಳಾಸಗಳನ್ನು ಹಾಗೂ ಎಲ್ಲಾ ವಿವರಗಳನ್ನು kacdc.karnataka.gov.in ಇಲ್ಲಿ ಪಡೆಯಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.