ನಾಪೋಕ್ಲು ಅ.31 : ಅಖಿಲ ಕೊಡವ ಸಮಾಜದ ಅಧ್ಯಕ್ಷರಾಗಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ದಿವಂಗತ ಮಾತಂಡ ಮೊಣ್ಣಪ್ಪ ಅವರ ಜ್ಞಾಪಕಾರ್ಥವಾಗಿ ವಿರಾಜಪೇಟೆಯ ಮುಖ್ಯ ರಸ್ತೆಯೊಂದಕ್ಕೆ ಅವರ ಹೆಸರು ನಾಮಕರಣ ಮಾಡಲು ಅಖಿಲ ಕೊಡವ ಸಮಾಜ ಮನವಿ ಮಾಡಿದೆ.
ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರಿಗೆ ಅಖಿಲ ಕೊಡವ ಸಮಾಜದ ಪರವಾಗಿ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ ಹಾಗೂ ಗೌರವ ಕಾರ್ಯದರ್ಶಿ ಕೀತಿಯಂಡ ವಿಜಯಕುಮಾರ್ ಅವರು ಮನವಿ ಸಲ್ಲಿಸಿದರು.
ಈ ಸಂದರ್ಭ ಕುಂಜಿಲ ಗ್ರಾ.ಪಂ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ