ಗುಜರಾತ್ : ಭಾರತಕ್ಕೆ ಮುಂದಿನ 25 ವರ್ಷಗಳು ಅತ್ಯಂತ ಪ್ರಮುಖ ವರ್ಷಗಳಾಗಿರಲಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದರು.
ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, ಮಂಗಳವಾರ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಏಕತಾ ನಗರದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಈ ದಿನ ನಮ್ಮ ಸಮಾಜದಲ್ಲಿ ಏಕತೆ ಮತ್ತು ಸಹೋದರತ್ವದ ಮನೋಭಾವವನ್ನು ಇನ್ನಷ್ಟು ಹೆಚ್ಚಿಸಲಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿ ನೆರೆದಿರುವ ಯುವಕರು ಮತ್ತು ಧೈರ್ಯಶಾಲಿಗಳ ಉತ್ಸಾಹವು ‘ರಾಷ್ಟ್ರೀಯ ಏಕತಾ ದಿನ’ದ ದೊಡ್ಡ ಶಕ್ತಿಯಾಗಿದೆ ಎಂದು ಹೇಳಿದರು.
ಮಿನಿ ಭಾರತದ ರೂಪ ವಿಭಿನ್ನವಾಗಿ ಕಾಣಿಸುತ್ತಿದೆ. ಇಲ್ಲಿ ಭಾಷೆ, ಸಂಪ್ರದಾಯ ವಿಭಿನ್ನವಾಗಿದೆ. ಆದರೆ, ಪ್ರತಿಯೊಬ್ಬ ವ್ಯಕ್ತಿಯೂ ಒಗ್ಗಟ್ಟಾಗಿದ್ದಾರೆ. ಅದು ಬಲವಾದ ಸಂಪರ್ಕವನ್ನು ಹೊಂದಿದೆ.
ಆಗಸ್ಟ್ 15 ರಂದು ಕೆಂಪು ಕೋಟೆಯಲ್ಲಿ ನಡೆದ ಕಾರ್ಯಕ್ರಮ, ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆದ ಪರೇಡ್ ಮತ್ತು ನರ್ಮದಾ ತೀರದಲ್ಲಿ ಏಕತಾ ದಿನಾಚರಣೆ ದೇಶದ ಮೂರು ಶಕ್ತಿಗಳಾಗಿವೆ. ಮುಂದಿನ 25 ವರ್ಷಗಳಲ್ಲಿ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಒತ್ತು ನೀಡಲಾಗುವುದು. ಈ 25 ವರ್ಷಗಳು ನಮ್ಮ ದೇಶಕ್ಕೆ ಅತ್ಯಂತ ಮಹತ್ವದ ವರ್ಷಗಳಾಗಿರಲಿವೆ ಎಂದು ಹೇಳಿದರು.