ಮಡಿಕೇರಿ ಅ.31 : ಮಕ್ಕಳಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಂಗಳೂರಿನ ನಿಮ್ಹಾನ್ಸ್ ಸಹಯೋಗದಲ್ಲಿ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್‍ನಿಂದ ನ.8 ರಿಂದ 10 ರವರೆಗೆ ಜಿಲ್ಲೆಯ ಹತ್ತು ಶಾಲೆಗಳಲ್ಲಿ ವಿಶೇಷ ಶಿಬಿರ ನಡೆಯಲಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟ್ರಸ್ಟ್‍ನ ಪ್ರಮುಖ ಅಚ್ಚಯ್ಯ ಎಂ.ಎ. ಅವರು 2020 ರಲ್ಲಿ ಮಕ್ಕಳ ಮಾನಸಿಕ ಆರೋಗ್ಯದ ಕಾಳಜಿಯಿಂದ ಆರಂಭಗೊಂಡ ಮೈಂಡ್ ಅಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಕಾರದೊಂದಿಗೆ ಅವರ ಅಧೀನದಲ್ಲಿರುವ ಮಕ್ಕಳಿಗೆ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ವಿವಿಧ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿದೆಯೆಂದು ತಿಳಿಸಿದರು.
ಇದರೊಂದಿಗೆ ಮಕ್ಕಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ವಿಮಾನ ಡೈನಾಮಿಕ್ಸ್, ಕಲೆ, ತ್ಯಾಜ್ಯ ನಿರ್ವಹಣೆ, ನ್ಯಾಯಾಂಗ, ಕೊಡಗಿನ ಪಕ್ಷಿಗಳು ಹೀಗೆ ವಿವಿಧ ವಿಷಯಗಳ ಕುರಿತು ಶಿಬಿರಗಳನ್ನು ಆಯೋಜಿಸಿಕೊಂಡು ಬಂದಿದೆ. 2021 ರಿಂದ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ ಮಾನಸಿಕ ಆರೋಗ್ಯದ ಅರಿವಿಗೆ ‘ಪೈಂಟ್ ದಿ ವಾಲ್’ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.
ಟ್ರಸ್ಟ್‍ನ ಪ್ರಮುಖರಾದ ಬಿ.ವಾಗೀಶ್ ಮಾತನಾಡಿ, ನ.6 ರಿಂದ 8ರವರೆಗೆ ಮೈಸೂರು ಜಿಲ್ಲೆಯ ವಿವಿಧ ಶಾಲೆಗಳಲ್ಲಿ ಹಾಗೂ ನ.8 ರಿಂದ 10ರವರೆಗೆ ಜಿಲ್ಲೆಯ ಆಯ್ದ ಶಾಲೆಗಳಲ್ಲಿ ಮಾನಸಿಕ ಆರೋಗ್ಯದ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರವನ್ನು ಪ್ರೌಢ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಕೇಂದ್ರೀಕರಿಸಿಕೊಂಡು ನಡೆಸಲಾಗುತ್ತಿದೆ. ಶಿಬಿರದಲ್ಲಿ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಅವರಲ್ಲಿನ ಸಮಸ್ಯೆಗಳ ಬಗ್ಗೆ ಅರಿವನ್ನು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆಂದು ಮಾಹಿತಿ ನೀಡಿ, ಶಿಬಿರದಲ್ಲಿ ಶಿಕ್ಷಕರೊಂದಿಗೆ ಪೋಷಕರನ್ನು ಪಾಲ್ಗೊಳ್ಳುವಂತೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‍ನ ಕಾವ್ಯ ಪೆಮ್ಮಯ್ಯ ಉಪಸ್ಥಿತರಿದ್ದರು.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*