ವಿರಾಜಪೇಟೆ ಅ.31 : ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್. ಎಸ್.ಎಸ್. ಘಟಕದ ವತಿಯಿಂದ ರಾಷ್ಟ್ರೀಯ ಏಕತಾ ದಿವಸ್ ಆಚರಿಸಲಾಯಿತು.
ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಪಾ.ಐಸಾಕ್ ರತ್ನಾಕರ್ ವಿದ್ಯಾರ್ಥಿಗಳಿಗೆ ಏಕತಾ ದಿವಸ್ ಪ್ರತಿಜ್ಞೆಯನ್ನು ಭೋದಿಸಿದರು.
ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ದಿನದ ಮಹತ್ವದ ಬಗ್ಗೆ ಮಾತನಾಡಿ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ಏಕತಾ ದಿನವನ್ನು ರಾಷ್ಟ್ರಾದ್ಯಂತ ಆಚರಿಸಲಾಗುತಿದ್ದು, ವಿದ್ಯಾರ್ಥಿಗಳು ಸಂವಿಧಾನದ ಆಶಯವನ್ನು ಎತ್ತಿ ಹಿಡಿಯುವುದರ ಮೂಲಕ ಭದ್ರ ರಾಷ್ಟ್ರದ ನಿರ್ಮಾಣ ಮಾಡಬೇಕೆಂದರು. ಭಾರತವು ವೈವಿಧ್ಯ ಸಂಸ್ಕೃತಿ ಇರುವ ದೇಶವಾಗಿದ್ದು ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಬೇಕೆಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ, ಎನ್.ಎಸ್..ಎಸ್ ಅಧಿಕಾರಿ ಶಾಂತಿಭೂಷಣ್, ಉಪನ್ಯಾಸಕರು ವಿದ್ಯಾರ್ಥಿಗಳು ಹಾಜರಿದ್ದರು.








