ಮಡಿಕೇರಿ ಅ.31 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ನಡೆಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ನಿಕಟಪೂರ್ವ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಮಾಜಿ ಅಧ್ಯಕ್ಷರಾದ ಕೊಲ್ಯದ ಗಿರೀಶ್, ಸಮಾಜದ ಮುಖಂಡರು ಇತರರು ಪುಷ್ಪ ನಮನ ಸಲ್ಲಿಸಿ, ಗೌರವಿಸಿದರು.
ಈ ಸಂದರ್ಭದಲ್ಲಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಕಡ್ಲೇರ ತುಳಸಿ ಮೋಹನ್, ಲಿಟ್ಲ್ ಪ್ಲವರ್ ಶಾಲೆಯ ಮುಖ್ಯಸ್ಥರಾದ ಸುನಿತಾ, ಭಾರತೀಯ ಸೇವಾದಳ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಗುಡ್ಡೆಮನೆ ಅಪ್ಪಯ್ಯಗೌಡರ ಕುರಿತು ‘ನಮನ ಗೀತೆ’ ಹಾಡಿದರು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಭಾರತ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಸದಾ ಸ್ಮರಿಸಬೇಕಿದೆ ಎಂದು ಹೇಳಿದ್ದಾರೆ.
ಭಾರತ ಸ್ವಾತಂತ್ರ್ಯಕ್ಕಾಗಿ ಅಮರ ವೀರರಾದ ಪ್ರತಿಯೊಬ್ಬರನ್ನು ಸ್ಮರಿಸುವುದು ಅತ್ಯಗತ್ಯ. ಆ ನಿಟ್ಟಿನಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರಂತಹ ವೀರರ ಸಂಸ್ಮರಣಾ ಕಾರ್ಯಕ್ರಮ ಮಹತ್ತರವಾಗಿದೆ ಎಂದು ವಿವರಿಸಿದರು.
‘ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಫಲ ನಾವೆಲ್ಲರೂ ಒಂದೆಡೆ ಸೇರಲು ಸಾಧ್ಯವಾಗಿದೆ. ಆ ನಿಟ್ಟಿನಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರ ಹೋರಾಟದ ದಾರಿಯನ್ನು ಸ್ಮರಿಸಿ ಮುನ್ನಡೆಯಬೇಕಿದೆ ಎಂದು ಹೇಳಿದರು.’
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಅ.31 ಇತಿಹಾಸದ ದಿನವಾಗಿದೆ. ಗುಡ್ಡೆಮನೆ ಅಪ್ಪಯ್ಯ ಗೌಡರು ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ್ದು, ಒಂದು ರೀತಿ ಹೆಮ್ಮೆ ಎನಿಸಿದರೆ, ಮತ್ತೊಂದು ರೀತಿ ಗಲ್ಲ್ಲಿಗೇರಿಸಿದ ದಿನವನ್ನು ಸ್ಮರಿಸುವುದು ದುಃಖವಾಗುತ್ತದೆ ಎಂದು ನುಡಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಗುಡ್ಡೆಮನೆ ಅಪ್ಪಯ್ಯ ಗೌಡ ಅವರ ವ್ಯಕ್ತಿಚಿತ್ರ ಕುರಿತು ಪಠ್ಯಪುಸ್ತಕದಲ್ಲಿ ಅಧ್ಯಯನವಾಗಬೇಕು. ಇತಿಹಾಸವನ್ನು ಎಂದೂ ಸಹ ತಿರುಚಬಾರದು ಎಂದು ಡಾ.ಮಂತರ್ಗೌಡ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಇಲಾಖೆಗಳ ಜೊತೆ ಚರ್ಚಿಸಲಾಗುವುದು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಕೊಡಗು ಗೌಡ ಸಮಾಜಗಳ ಒಕ್ಕೂಟ ಎಲ್ಲರೂ ಸೇರಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದರು.
‘ಹಾಗೆಯೇ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಸ್ಥಳವನ್ನು ಇನ್ನಷ್ಟು ಆಕರ್ಷಣೀಯಗೊಳಿಸುವ ನಿಟ್ಟಿನಲ್ಲಿ ಮುಂದಾಗಲಾಗುವುದು ಎಂದು ಡಾ.ಮಂತರ್ ಗೌಡ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.’
ನಂತರ ನಗರದ ಕೋಟೆ ಸ್ಥಳದಲ್ಲಿ ಗುಡ್ಡೆಮನೆ ಅಪ್ಪಯ್ಯ ಗೌಡರನ್ನು ಗಲ್ಲಿಗೇರಿಸಿದ ಸ್ಥಳದಲ್ಲಿ ಗೌರವ ನಮನ ಸಲ್ಲಿಸಲಾಯಿತು. ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಚೊಕ್ಕಾಡಿ ಪ್ರೇಮ ರಾಘವಯ್ಯ ಮತ್ತು ತಂಡದವರು ಲಾವಣಿ ಗೀತೆ ಹಾಡಿ ಗಮನ ಸೆಳೆದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಮಾತನಾಡಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ನಿಕಟ ಪೂರ್ವ ಅಧ್ಯಕ್ಷರಾದ ಲಕ್ಷ್ಮೀನಾರಾಯಣ ಕಜೆಗದ್ದೆ, ಕೊಲ್ಯದ ಗಿರೀಶ್, ಕೊಡಗು ಗೌಡ ಸಮಾಜದ ಅಧ್ಯಕ್ಷರಾದ ಪೇರಿಯನ ಜಯಾನಂದ, ಕೊಡಗು ಗೌಡ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಅಮೆ ದಮಯಂತಿ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಡಿವೈಎಸ್ಪಿ ಜಗದೀಶ್, ತಹಶೀಲ್ದಾರ್ ಪ್ರವೀಣ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕದ ಅಧ್ಯಕ್ಷರಾದ ಕಡ್ಲೇರ ತುಳಸಿ ಮೋಹನ್, ನಗರಸಭೆ ಮಾಜಿ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ನಗರಸಭೆ ಪೌರಾಯುಕ್ತರಾದ ವಿಜಯ್, ಕೊಡಗು ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ನವೀನ್ ಅಂಬೆಕಲ್ಲು, ಕೊಡಗು ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪಾಣತ್ತಲೆ ಜಗದೀಶ್, ಕೊಡಗು ಗೌಡ ವಿದ್ಯಾ ಸಂಘದ ಗೌರವ ಕಾರ್ಯದರ್ಶಿ ಪೇರಿಯನ ಉದಯ ಕುಮಾರ್, ಹಿರಿಯರಾದ ದಂಬೆಕೋಡಿ ಆನಂದ್, ಕುಶಾಲನಗರ ಗೌಡ ಸಮಾಜದ ಅಧ್ಯಕ್ಷರಾದ ಗಣಿಪ್ರಸಾದ್, ಸುಂಟಿಕೊಪ್ಪದ ಗುಡ್ಡೆಮನೆ ಹರೀಶ್, ಗುಡ್ಡೆಮನೆ ಮಣಿ ಕುಮಾರ್, ಕುಡೆಕಲ್ ಸಂತೋಷ್, ಭಾಗಮಂಡಲ, ಚೇರಂಬಾಣೆ, ಮರಗೋಡು, ಚೆಟ್ಟಳ್ಳಿ, ವಿರಾಜಪೇಟೆ, ಸುಂಟಿಕೊಪ್ಪ, ಮಕ್ಕಂದೂರು ಗೌಡ ಸಮಾಜಗಳ ಪ್ರತಿನಿಧಿಗಳು, ಅಧಿಕಾರಿಗಳು ಇತರರು ಇದ್ದರು. ರಿಜಿಸ್ಟ್ರಾರ್ ಚಿನ್ನಸ್ವಾಮಿ ಸ್ವಾಗತಿಸಿದರು. ಧನಂಜಯ ಅಗೋಲಿಕಜೆ ನಿರೂಪಿಸಿ, ವಂದಿಸಿದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*