ಮಡಿಕೇರಿ ಅ.31 : ಜಿಲ್ಲಾಡಳಿತ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಏಕತಾ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಪ್ರತಿಜ್ಞಾ ವಿಧಿ ಭೋಧಿಸಿದರು.
ರಾಷ್ಟ್ರದ ಐಕ್ಯತೆ, ಸಮಗ್ರತೆ ಮತ್ತು ಭದ್ರತೆ ಕಾಪಾಡಲು ನಮ್ಮನ್ನು ಅರ್ಪಿಸಿಕೊಳ್ಳುತ್ತೇವೆ ಮತ್ತು ದೇಶ ಭಾಂದವರಲ್ಲಿ ಸಂದೇಶವನ್ನು ಸಾರಲು ಶ್ರಮಿಸುತ್ತೇನೆ ಎಂದು ಪ್ರಜ್ಞಾಪೂರ್ವಕವಾಗಿ ಪ್ರತಿಜ್ಞೆ ಮಾಡಲಾಯಿತು.
ರಾಷ್ಟ್ರದ ಪ್ರಥಮ ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ದೂರದೃಷ್ಟಿ ಮತ್ತು ಕಾರ್ಯಕ್ಷಮತೆಯಿಂದ ಸಾಧಿಸಿದ ರಾಷ್ಟ್ರೀಯ ಏಕೀಕರಣದ ಸ್ಫೂರ್ತಿ ಕಾಪಾಡುತ್ತೇನೆ. ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ತಮ್ಮದೇ ಆದ ಕೊಡುಗೆ ನೀಡುತ್ತೇನೆ ಎಂದು ಪ್ರತಿಜ್ಞೆ ಸ್ವೀಕರಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.









