ಮಡಿಕೇರಿ ಅ.31 : ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ‘ಜಾಗೃತಿ ಅರಿವು ಸಪ್ತಾಹ’ ಪ್ರಯುಕ್ತ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರತಿಜ್ಞಾ ವಿಧಿ ಕಾರ್ಯಕ್ರಮವು ಜರುಗಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಪ್ರತಿಜ್ಞಾ ವಿಧಿ ಭೋದಿಸಿದರು.
ಲೋಕಾಯುಕ್ತ ಡಿವೈಎಸ್‍ಪಿ ಪವನ್ ಕುಮಾರ್ ಅವರು ಮಾತನಾಡಿ ಸರ್ಕಾರಿ ನೌಕರರಿಗೆ ಸರ್ಕಾರ ಕಾಲ ಕಾಲಕ್ಕೆ ವೇತನ ಹೆಚ್ಚಳ, ಮುಂಬಡ್ತಿ, ಗಳಿಕೆ ರಜೆ ಹೀಗೆ ಹಲವು ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಮುಂದಾಗಬಾರದು ಎಂದು ಹೇಳಿದರು.
ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಪವನ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಅವರ ಕಾನೂನು ಸಲಹೆಗಾರರಾದ ಎ.ಲೋಕೇಶ್ ಕುಮಾರ್, ಭೂದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಚುನಾವಣಾ ತಹಶೀಲ್ದಾರ್ ಸಿ.ಜಿ.ರವಿಶಂಕರ್ ಇತರರರು ಇದ್ದರು.









