ಮಡಿಕೇರಿ ನ.1 : ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ವತಿಯಿಂದ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ಕುವೆಂಪು ಉದ್ಯಾನವನದಲ್ಲಿ ವಿಷ್ಣು ಸೇನಾ ಜಿಲ್ಲಾಧ್ಯಕ್ಷ ರಫೀಕ್ (ದಾದಾ )ಕುವೆಂಪು ಪುತ್ಥಳಿಗೆ ಮಾಲಾರ್ಪಣೆ ಮಾಡಿ, ದಿನದ ಮಹತ್ವ ಕುರಿತು ತಿಳಿಸಿದರು.
ಮೂಡ ಅಧ್ಯಕ್ಷ ಮುನೀರ್ ಅಹ್ಮದ್ ಅವರು ಧ್ವಜಾರೋಹಣವನ್ನು ನೆರವೇರಿಸಿ, ಶುಭಹಾರೈಸಿದರು.
ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷರಾದ ಕವಿತಾ ಪ್ರಸಾದ್ ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು. ನವೆಂಬರ್ ಒಂದಕ್ಕೆ ಕನ್ನಡ ರಾಜ್ಯೋತ್ಸವ ಸೀಮಿತವಾಗದೆ ಪ್ರತಿನಿತ್ಯವೂ ಕನ್ನಡವನ್ನು ಉಳಿಸಿಕೊಂಡು ಹೋಗುವಂತೆ ಸಲಹೆ ನೀಡಿದರು.
ತಾಲೂಕು ಅಧ್ಯಕ್ಷ ರವಿಗೌಡ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಭಾಷಾ, ಕೋಟೆ ಮಾರಿಯಮ್ಮ ದಸರಾ ಸಮಿತಿ ಅಧ್ಯಕ್ಷ ಪ್ರಭುರೈ, ವೀರಭದ್ರ ಮುನೇಶ್ವರ ದೇವಾಲಯದ ಗೌರವ ಅಧ್ಯಕ್ಷ ಪಿ.ಜಿ.ಮಂಜುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಎಂ.ಎ.ಮುನೀರ್ ಮಾಚರ್, ಕನ್ನಡ ಸಾಹಿತ್ಯ ಪರಿಷತ್ ನ ತಾಲೂಕು ಅಧ್ಯಕ್ಷ ಅಂಬೇಕಲ್ ನವೀನ್, ನಗರಸಭಾ ಮಾಜಿ ಸದಸ್ಯ ಪ್ರಕಾಶ್ ಆಚಾರ್ಯ, ಪ್ರಮುಖರಾದ ಆರ್.ಪಿ.ಚಂದ್ರಶೇಖರ್, ನಗರ ಅಧ್ಯಕ್ಷ ಭರತ್ , ಮಡಿಕೇರಿ ಮಹಿಳಾ ಘಟಕದ ಅಧ್ಯಕ್ಷರಾದ ಮೀನಾಜ್ ಪ್ರವೀಣ್, ತಾಲೂಕು ಉಪಾಧ್ಯಕ್ಷ ನಾಗೇಶ್, ತಾಲೂಕು ಉಪ ಕಾರ್ಯದರ್ಶಿ ಅಕ್ಷಿತ್ , ತಾಲೂಕು ಮಹಿಳಾ ಅಧ್ಯಕ್ಷರಾದ ಕವಿತಾ ಪ್ರಸಾದ್, ಮೂರ್ನಾಡು ಹೋಬಳಿ ಅಧ್ಯಕ್ಷ ವಸಂತ್, ನಗರ ಮಹಿಳಾ ಉಪಾಧ್ಯಕ್ಷರಾದ ಲಿಲ್ಲಿಗೌಡ ನಗರ ಕಾರ್ಮಿಕ ಘಟಕದ ಅಧ್ಯಕ್ಷ ದಿವ್ಯ, ವೇದಿಕೆ ಸದಸ್ಯರುಗಳಾದ ಸೈಮನ್, ಪುನೀತ್, ದೀಕ್ಷಿತ್, ಆಕಾಶ್ ಹಾಗೂ ಹಲವು ಕಾರ್ಯಕರ್ತರುಗಳು, ಸಾರ್ವಜನಿಕರು ಹಾಜರಿದ್ದರು.