ಮಡಿಕೇರಿ ನ.1 : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಅಚರಿಸಲಾಯಿತು.
ನಗರದ ಗಾಂಧಿ ಮೈದಾನದ ರಂಗಮಂದಿರ ಬಳಿ ಕನ್ನಡ ಸಾಹಿತ್ಯ ಪರಿಷತ್ ನ ನಿಕಟ ಪೂರ್ವ ಅಧ್ಯಕ್ಷ ಟಿ.ಪಿ. ರಮೇಶ್ ಧ್ವಜಾರೋಹಣ ಮಾಡಿದರು.
ಈ ಸಂದರ್ಭ ಪರಿಷತ್ ನ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮದ್, ಸಂಘಟನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಬೇಬಿ ಮ್ಯಾಥ್ಯು, ಅಂಬೇಕಲ್ ನವೀನ್, ಪ್ರಕಾಶ್ ಆಚಾರ್ಯ, ಪುದಿಯನೆರವನ ರಿಷಿತ್ ಹಾಜರಿದ್ದರು.