ಮಡಿಕೇರಿ ನ.1 : ಕರಿಕೆ ಗ್ರಾ.ಪಂ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗಡಿ ಗ್ರಾಮ ಕರಿಕೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಎಳ್ಳುಕೊಚ್ಚಿ ಯಲ್ಲಿ ಪಂಚಾಯತಿ ಅಧ್ಯಕ್ಷ ಎನ್.ಬಾಲಚಂದ್ರನ್ ನಾಯರ್ ಧ್ವಜಾರೋಹಣ ನೆರವೇರಿಸಿದರು.
ಸಭಾ ಕಾರ್ಯಕ್ರಮಕ್ಕೂ ಮುನ್ನ ಪ್ರೌಢ ಶಾಲೆಯಿಂದ ಎಳ್ಳು ಕೊಚ್ಚಿ ಪಟ್ಟಣದ ವರೆಗೆ ಕನ್ನಡ ಘೋಷಣೆಗಳೊಂದಿಗೆ ಮೆರವಣಿಗೆ ನಡೆಯಿತು. ನಂತರ ಸಿಹಿ ಹಂಚಿ ಸಂಭ್ರಮಿಸಿದರು.
ಪಂಚಾಯತಿ ಉಪಾಧ್ಯಕ್ಷರಾದ ಕಲ್ಪನಾ ಜಗದೀಶ್, ಸದಸ್ಯರುಗಳಾದ ಕಟ್ಟ ಕೋಡಿ ದೇವದತ್ತ, ಆಯಿಷಾ, ಜಯಶ್ರೀ ಜನಾರ್ಧನ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಪದಾಧಿಕಾರಿಗಳು, ಸದಸ್ಯರುಗಳು, ಕರಿಕೆ ಪ್ರೌಢ ಶಾಲೆಯ ಶಿಕ್ಷಕರು, ಎಸ್‍ಡಿಎಂಸಿ ಸದಸ್ಯರು, ವಿದ್ಯಾರ್ಥಿಗಳು, ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಎಸ್‍ಡಿಎಂಸಿ ಪದಾಧಿಕಾರಿಗಳು, ಸಹಕಾರ ಸಂಘದ ಉಪಾಧ್ಯಕ್ಷ ಎಂ.ಎಂ.ರೆಲಸನ್, ನಿರ್ದೇಶಕರು, ಅಂಗನವಾಡಿ ಕಾರ್ಯಕರ್ತರು, ಪಂಚಾಯತಿ ಸಿಬ್ಬಂದಿ ವರ್ಗ, ಸಾರ್ವಜನಿಕರು ಹಾಜರಿದ್ದರು. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪಿ.ಪಿ.ಗಣಪತಿ ಎಲ್ಲರನ್ನು ಸ್ವಾಗತಿಸಿ, ವಂದಿಸಿದರು.