Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣಬೇಕು : ಡಾ. ಎನ್.ವಿ. ಕರುಣಾಕರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣಬೇಕು : ಡಾ. ಎನ್.ವಿ. ಕರುಣಾಕರ

ನವೆಂಬರ್ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.1 : ಎಲ್ಲಾ ಭಾಷೆಗಳನ್ನು ಗೌರವಯುತವಾಗಿ ಕಾಣುವ ಸ್ವೀಕೃತಿಯ ಮನೋಭಾವ ಪ್ರತಿಯೊಬ್ಬ ರೂಪಿಸಿಕೊಳ್ಳಬೇಕು. ಪ್ರಸ್ತುತ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಗೂ ಸಾಹಿತ್ಯ ಸಂಸ್ಕೃತಿಯ ಹಿನ್ನೆಲೆಯಲ್ಲಿ ಭಾಷಿಕ ಎಚ್ಚರವೊಂದು ಒಡಮೂಡಿದೆ. ಆದರೂ ಸಹ ನಮ್ಮ ನಡುವೆ ಪ್ರತ್ಯೇಕತ ಕೂಗು ಮೂಡುತ್ತಲೇ ಇದೆ. ನಾವು ಎಚ್ಚರಿಕೆಯಿಂದ ಭಾಷೆಯನ್ನು ಒಳಗೊಳ್ಳುವ ಪ್ರಯತ್ನ ಮಾಡಬೇಕಾಗಿದೆ. ಮಾತ್ರವಲ್ಲ ಮಕ್ಕಳು ಕನ್ನಡದ ಜೊತೆಯಲ್ಲಿ ತಮ್ಮ ಮಾತೃ ಭಾಷೆಯಲ್ಲಿ ಕಲಿಕೆಯನ್ನು ಮುಂದುವರೆಸುವ ಅಗತ್ಯವಿದೆ ಎಂದು ಕಾಲೇಜಿನ ಉಪನ್ಯಾಸಕ ಡಾ. ಎನ್.ವಿ. ಕರುಣಾಕರ
ಅಭಿಪ್ರಾಯಪಟ್ಟರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ವಿಭಾಗ, ಎನ್ ಎಸ್ ಎಸ್, ಎನ್ ಸಿ.ಸಿ, ಇಸಿ/ಸಿಸಿ, ಕ್ರೀಡಾ ಹಾಗೂ ವಿದ್ಯಾರ್ಥಿ ಸಂಘದ ವತಿಯಿಂದ ನಡೆದ “ಹೆಸರಾಯಿತು ಕರ್ನಾಟಕ-50 ರಾಜ್ಯೋತ್ಸವ ಸಂಭ್ರಮ” ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಸಂದರ್ಭದಲ್ಲಿ ಭ್ರಷ್ಟಾಚಾರ ಮುಕ್ತ ಕರ್ನಾಟಕ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪಠ್ಯ ಪುಸ್ತಕಗಳಲ್ಲಿ ಪ್ರಾದೇಶಿಕ ಭಾಷೆಗಳಿಗೂ ಅವಕಾಶ ಕಲ್ಪಿಸಲಾಗಿತ್ತು. ಆ ಬಗೆಯಲ್ಲಿ ಕನ್ನಡ ತನ್ನ ಸಹೋದರ ಭಾಷೆಗಳನ್ನು ಒಳಗೊಳ್ಳುವ ಪ್ರಕ್ರಿಯೆಗೆ ನಿರಂತರ ಚಾಲನೆ ನೀಡಬೇಕು. ಆ ಮೂಲಕ ಕನ್ನಡದ ಜೊತೆಯಲ್ಲಿ ಪ್ರಾದೇಶಿಕ ಭಾಷೆಗಳನ್ನು ಉಳಿಸಿ ಬೆಳಸುವ ಕೆಲಸ ಆಗಬೇಕು ಎಂದು ಹೇಳಿದರು.

ರಾಮ, ಧರ್ಮರಾಯ, ಹರಿಶ್ಚಂದ್ರ ರಂತಹ ಪಾತ್ರಗಳನ್ನು ಸೃಷ್ಟಿ ಮಾಡುವ ಮೂಲಕ ಭ್ರಷ್ಟರಹಿತ ಸಮಾಜದ ಆದರ್ಶವಾದಿ ರೂಪಕವನ್ನು ಕಟ್ಟಿಕೊಡುವ ಪ್ರಯತ್ನ ಮಾಡಿದೆ. ಒಳ್ಳೆದನ್ನು ಕೇಡಿನ ಜೊತೆಯಲ್ಲಿ ಮುಖಾಮುಖಿ ಮಾಡಿಕೊಳ್ಳುವ ಪ್ರಯತ್ನ ಇದಾಗಿದೆ. ಗಾಂಧಿ, ವಿನೋಬಾವೆಯಂತ ವ್ಯಕ್ತಿಗಳು ಭ್ರಷ್ಟಾಚಾರ ಮುಕ್ತ ಸಮಾಜದ ನಿರ್ಮಿತಿಗಾಗಿ ಚಳವಳಿಗಳನ್ನು ರೂಪಿಸಿದರು. ಸಂಸ್ಕಾರಕ್ಕೆ ಮೌಲ್ಯಗಳನ್ನು ಜೋಡಿಸುವ ಮೂಲಕ ನೈತಿಕ ಶಿಕ್ಷಣವನ್ನು ಒದಗಿಸುವುದರಿಂದ ಭ್ರಷ್ಟಾಚಾರವನ್ನು ತಗ್ಗಿಸಬಹುದು ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಕಾಲೇಜಿನ ಪೋಷಕ ಶಿಕ್ಷಕ ಸಂಘದ ಅಧ್ಯಕ್ಷ ಕೆ.ಪಿ.ಮಾಥ್ಯೂ, ವಿದ್ಯಾರ್ಥಿಗಳು ಉತ್ತಮ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು. ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜಿನ ಐಕ್ಯುಎಸಿ ಸಂಯೋಜಕರಾದ ಡಾ. ರಾಜೇಂದ್ರ ಮಾತನಾಡಿ, ಕರ್ನಾಟ ವೈವಿಧ್ಯಮಯ ಭೂ ಪ್ರದೇಶ. ಇಲ್ಲಿ ಹಲವು ಸಂಸ್ಕೃತಿಗಳು ಸಹಜವಾಗಿ ಸೌಹಾರ್ದ ಪರಂಪರೆಯನ್ನು ಹುಟ್ಟುಹಾಕುವ ಪ್ರಯತ್ನ ಮಾಡಿದೆ. ಈ ಸೌಹಾರ್ದ ಪರಂಪರೆಗೆ ಕನ್ನಡ ಭಾಷೆಯೇ ಮೂಲಧಾತುವಾಗಿದೆ. ಕನ್ನಡ ಭಾಷೆಗೆ ಸೌಹಾರ್ದ ಜಾಯಮಾನವೊಂದು ಸಾಹಿತ್ಯ ಪರಂಪರೆಯಿಂದ ದತ್ತವಾಗಿದೆ. ಕನ್ನಡ ಕೇವಲ ಭಾಷೆ ಅಲ್ಲ ಅದೊಂದು ಜೀವನ ವಿಧಾನ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ರಾಘವ, ಕನ್ನಡ ಸಂರಕ್ಷಣೆ ಯುವ ಜನಾಂಗದ ಕರ್ತವ್ಯ. ಯುವ ಜನಾಂಗವನ್ನು ಉತ್ತಮ ಹಾದಿಯಲ್ಲಿ ಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಇತ್ತೀಚಿನ ದಿನಗಳಲ್ಲಿ ಕನ್ನಡ ಬಳಕೆಯಲ್ಲಿ ದೋಷಗಳನ್ನು ಯುವ ಜನತೆ ಹೆಚ್ಚಾಗಿ ಮಾಡುತ್ತಿದೆ. ಕನ್ನಡ ಭಾಷೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಅನುತ್ತೀರ್ಣಗೊಳ್ಳುತ್ತಿದ್ದಾರೆ. ಭಾಷೆಯ ಬಗ್ಗೆ ಯುವ ಜನತೆಯಲ್ಲಿ ಅರಿವಿನ ಕೊರತೆ ಇದೆ. ಅದನ್ನು ಮೀರಬೇಕಾಗಿದೆ. ಕನ್ನಡ ಜಗತ್ತಿನ ಅತ್ಯಂತ ನವಿರಾದ ಭಾಷೆ, ಅಭಿವ್ಯಕ್ತಿಗೆ ಪೂರಕವಾದ ಭಾಷೆ. ಭಾಷೆಯ ಉಳಿವಿಗಾಗಿ ಸರಕಾರಗಳು ನಿಯಮಗಳನ್ನು ರೂಪಿಸುತ್ತದೆ. ಆದರೆ ಅದು ಸಾರ್ವಜನಿಕವಾಗಿ ಅನುಷ್ಠಾನಕ್ಕೆ ಬರುವಾಗ ಅಡೆತಡೆಗಳು ಏರ್ಪಡುತ್ತದೆ. ಈ ಬಗ್ಗೆ ಕಾಳಜಿಯನ್ನು ವಹಿಸಬೇಕಾಗುತ್ತದೆ. ಸಾಂಸ್ಕೃತಿಕ ಆಂದೋಲನಗಳು ಭಾಷಾ ವೈವಿಧ್ಯತೆಯ ಉಳಿವಿಗಾಗಿ ನಡೆಯಬೇಕಾಗಿದೆ. ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಮಾತನಾಡಿದರೆ ದಂಡ ವಿಧಿಸುವ ಪರಿಪಾಠ ಬದಲಾಗಬೇಕಾಗಿದೆ. ವಿದ್ಯಾರ್ಥಿಗಳು ಕಾಗೆಗಳ ರೀತಿಯ ಸಹಬಾಳ್ವೆಯ ಗುಣವನ್ನು ರೂಪಿಸಿಕೊಳ್ಳಬೇಕು. ನಾಯಿಗಳ ರೀತಿ ಕಚ್ಚಾಟದ ಗುಣವನ್ನು ಕೈ ಬಿಡಬೇಕು. ಆ ಮೂಲಕ ಮನುಕುಲದ ಸಾರ್ಥಕತೆಗೆಗಾಗಿ ದುಡಿಯಬೇಕು ಎಂದು ಹೇಳಿದರು.

ವಿಶ್ವದಲ್ಲಿ ಶೇ.2 ವಿಜ್ಞಾನಿಗಳ ವಿಭಾಗದಲ್ಲಿ ಸ್ಥಾನ ಪಡೆದುಕೊಂಡ ಭಾರತದಲ್ಲಿ 3ನೇ ಸ್ಥಾನದಲ್ಲಿರುವ ಕಾಲೇಜಿನ ಯುವವಿಜ್ಞಾನಿ ರಸಾಯನ ಶಾಸ್ತ್ರ ವಿಭಾಗದ ಡಾ. ಮಂಜುನಾಥ್ ಅವರಿಗೆ, ರಾಜ್ಯಮಟ್ಟದ ಅತ್ಯುತ್ತ ಶಿಕ್ಷಕ ಪ್ರಶಸ್ತಿ ಪಡೆದ ಪ್ರೊ. ನಾಗರಾಜ ಅವರಿಗೆ ಹಾಗೂ ಸುದೀರ್ಘ ಮೂವತ್ತು ವರ್ಷಗಳಿಂದ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎನ್.ವಿ.ಕರುಣಾಕರ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ, ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಎನ್ ಎಸ್ ಎಸ್ ಘಟಕದ ಯೋಜನಾಧಿಕಾರಿ ಡಾ. ಗಾಯತ್ರಿ, ಇಸಿ/ಸಿಸಿ ಸಂಯೋಜಕಿ ಡಾ. ರೇಣುಶ್ರೀ, ಗಣವಿಜ್ಞಾನ ವಿಭಾಗದ ಪ್ರಾಧ್ಯಾಪಕರಾದ ಶ್ರೀ ರವಿಶಂಕರ್, ಹಿಂದಿ ವಿಭಾಗದ ಡಾ. ಶ್ರೀಧರ ಹೆಗ್ಡೆ ಹಾಜರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಥಮ ಐಚ್ಛಿಕ ವಿದ್ಯಾರ್ಥಿ ನಿಧಾ ಫಜಿû್ಲೀ ನಿರೂಪಿದರು. ದೈಹಿಕ ಶಿಕ್ಷಣ ವಿಭಾಗದ ಅಧ್ಯಾಪಕ ರಮೇಶ್ ಸ್ವಾಗತಿಸಿದರು. ಕನ್ನಡ ವಿಭಾಗದ ಅಧ್ಯಾಪಕಿ ಡಾ. ಟಿ.ಎಸ್.ಮಹಾಲಕ್ಷ್ಮಿ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.