ವಿರಾಜಪೇಟೆ ನ.1 : 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಅಧ್ಯಕ್ಷ ಮಾಳೇಟಿರ ಎಂ.ಬೆಲ್ಲು ಬೋಪಯ್ಯ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.3ರಂದು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಕನ್ನಡ ನಾಡು ನುಡಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕರ್ನಾಟಕ ಸಂಘ ಕನ್ನಡಕ್ಕೆ ಸಂಬಂದಪಟ್ಟ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ. ಅಂದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವೂ ನಡೆಯಲಿದೆ. ಹಾಗೂ ಕಾರ್ಯಕ್ರಮದಲ್ಲಿ ಶಾಸಕರು ಸೇರಿದಂತೆ ಇತರ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಬೆಲ್ಲು ಬೋಪಯ್ಯ ಹೇಳಿದರು.
ಕರ್ನಾಟಕ ಸಂಘದ ಕಾರ್ಯದರ್ಶಿ ಮುಂಡ್ಯೋಳಂಡ ಕುಸುಮ ಸೋಮಣ್ಣ, ಕೋಶಾಧಿಕಾರಿ ಕೆ.ಯು.ಗಣೇಶ್ ತಮ್ಮಯ್ಯ, ಆಡಳಿತ ಮಂಡಳಿ ನಿದೇಶಕರಾದ ಸಿ.ಪಿ. ಕಾವೇರಪ್ಪ, ಸಿ.ಎಂ.ಸುರೇಶ್ ನಾಣಯ್ಯ, ಎ.ಎಂ.ಜೋಯಪ್ಪ, ಪುಗ್ಗೇರ ನಂದ, ರಾಣು ಮಂದಣ್ಣ, ಬಿ. ಎಂ. ಸುರೇಶ್, ಎಂ.ಜಿ. ಪೂಣಚ್ಚ, ಬಿ.ಆರ್ ಗಣೇಶ್, ಕೆ.ಎಂ. ಮೊಣ್ಣಪ್ಪ, ಎಂ.ಬಿ. ದೇವಯ್ಯ, ಕಚೇರಿ ಕಾರ್ಯದರ್ಶೀ ರಾಧ ಎಂ.ಪಿ. ಮತ್ತಿತರರು ಹಾಜರಿದ್ದರು.






