Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ : ನಾಡು-ನುಡಿ, ಭಾಷೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು : ಸೂದನ ರತ್ನಾವತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ : ನಾಡು-ನುಡಿ, ಭಾಷೆ ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು : ಸೂದನ ರತ್ನಾವತಿ

ನವೆಂಬರ್ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ/ಕೂಡಿಗೆ, ನ.1  :  ಕನ್ನಡ ನಾಡಿನ ನಾಡು- ನುಡಿ, ಭಾಷೆ, ಸಂಸ್ಕೃತಿ, ಸಾಹಿತ್ಯ, ಪರಂಪರೆಯನ್ನು ಉಳಿಸಿ ಬೆಳೆಸುವುದಕ್ಕೆ ಸರ್ಕಾರದ ಜತೆಗೆ ನಾಡಿನ ಜನರು ಸಹಕರಿಸುವ ಮೂಲಕ ಕೈಜೋಡಿಸಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ನಿವೃತ್ತ ಮುಖ್ಯ ವ್ಯವಸ್ಥಾಪಕರು ಹಾಗೂ  ಕುಶಾಲನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸೂದನ ರತ್ನಾವತಿ ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯತಿ ಹಾಗೂ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ  ರಾಷ್ಟ್ರಕವಿ ಕುವೆಂಪು ಕನ್ನಡ ಭಾಷಾ ಸಂಘದ ವತಿಯಿಂದ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್., ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ, ಎಸ್ ಡಿ ಎಂ ಸಿ ಹಾಗೂ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ  ಏರ್ಪಡಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಕಾರ್ಯಕ್ರಮದಲ್ಲಿ ಕನ್ನಡ ನಾಡು-ನುಡಿ ಸಂರಕ್ಷಣೆ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ: 50 ರ ಮಹತ್ವ ಕುರಿತು ಪ್ರಧಾನ ಭಾಷಣ ಮಾಡಿದರು.

ಕನ್ನಡ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಸಂರಕ್ಷಿಸುವ ಮೂಲಕ ಕನ್ನಡ ಸಂಸ್ಕೃತಿಯನ್ನು ದೇಶದಲ್ಲಿ ಎತ್ತಿ ಹಿಡಿಯುವ ನಿಟ್ಟಿನಲ್ಲಿ ಎಲ್ಲರೂ ಕನ್ನಡ ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.
ವಿಶ್ವದ ಅತಿ ಪ್ರಾಚೀನ ಭಾಷೆಗಳಲ್ಲಿ ಒಂದಾದ ಕನ್ನಡ ಭಾಷೆಯು ತನ್ನ ಸಾಹಿತ್ಯ ಶ್ರೀಮಂತಿಕೆಯಿಂದ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇತರ ಯಾವುದೇ ಭಾಷೆಗಳಲ್ಲಿಯೂ ಇರದಂತಹ ಕಟ್ಟುನಿಟ್ಟಿನ ನಿಯಮಗಳಿರುವ ಛಂದೋಬದ್ಧ ರಚನೆಗಳನ್ನು ಕನ್ನಡ ಭಾಷೆಯಲ್ಲಿ ಮಾತ್ರ ನೋಡಬಹುದಾಗಿದೆ
ಎಂದು ರತ್ನಾವತಿ ಹೇಳಿದರು.
ವಿದ್ಯಾರ್ಥಿಗಳಿಗೆ ಕವನ ರಚನಾ ಸ್ಪರ್ಧೆ, ಕನ್ನಡದ ಆಶುಭಾಷಣ ಸ್ಪರ್ಧೆ,ಭಾಷಣ, ಪ್ರಬಂಧ ಸ್ಪರ್ಧೆ, ಕಥಾ ಸ್ಪರ್ಧೆಗಳನ್ನು ಏರ್ಪಡಿಸುವುದರಿಂದ ಶಾಲಾ ಮಕ್ಕಳು ಭಾಗವಹಿಸುವ ಮೂಲಕ ಬರೆಯುವ ಕೌಶಲ್ಯ ಬೆಳೆಸುವ ಪ್ರಯತ್ನವನ್ನು ಮಾಡಬಹುದು. ಮಕ್ಕಳಿಗಾಗಿ ಕನ್ನಡದ ನಿಯತಕಾಲಿಕಗಳಲ್ಲಿ ಕಥೆಗಳನ್ನು ಮಕ್ಕಳಿಂದ ಬರೆಸಿ ಕಳುಹಿಸುವುದು ಮೊದಲಾದ ಕಾರ್ಯಕ್ರಮಗಳಿಂದ ಮಕ್ಕಳಲ್ಲಿ ಕನ್ನಡದಲ್ಲಿ ಆಸಕ್ತಿಯು ಹುಟ್ಟಿಸಬಹುದು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಡಿ.ಭಾಸ್ಕರ್
ನಾಯಕ್ , ಕರ್ನಾಟಕ ರಾಜ್ಯೋತ್ಸವವು ಕನ್ನಡಿಗರಾದ ನಮ್ಮಲ್ಲಿ ನವೆಂಬರ್ ನಲ್ಲಿ ಜಾಗೃತವಾಗುವ ಕನ್ನಡ ಭಾಷಾ ಪ್ರೇಮವು ಇಡೀ ವರ್ಷದುದ್ದಕ್ಕೂ ನಿತ್ಯೋತ್ಸವ ಆದಲ್ಲಿ ಕನ್ನಡ ಭಾಷೆ, ಸಾಹಿತ್ಯ,ಸಂಸ್ಕೃತಿ, ಪರಂಪರೆಯು ನಿಶ್ಚಯವಾಗಿಯೂ ಬೆಳೆಯಲು ಸಾಧ್ಯ ಎಂದರು.
ರಾಜ್ಯಕ್ಕೆ ‘ಕರ್ನಾಟಕ’ ಎಂದು ನಾಮಕರಣವಾಗಿ ಈಗ 50 ವರ್ಷ. ನಾಡಿನೆಲ್ಲೆಡೆ ಸುವರ್ಣ ಸಂಭ್ರಮ ಮನೆ ಮಾಡಿದೆ. ಈ ಅರ್ಧ ಶತಮಾನದಲ್ಲಿ ರಾಜ್ಯವು ಎಲ್ಲ ಕ್ಷೇತ್ರಗಳಲ್ಲಿಯೂ ಬೆಳೆದಿದೆ.
ಮುಂದಿನ ಪೀಳಿಗೆಗೆ ಕರ್ನಾಟಕ ರಾಜ್ಯದ ಕುರಿತು ಮಕ್ಕಳಲ್ಲಿ ಅಭಿಮಾನ ಮೂಡಿಸಬೇಕು ಎಂಬುದು ‌ಕನ್ಮಡ ರಾಜ್ಯೋತ್ಸವದ ಆಶಯವಾಗಿದೆ ಎಂದು ಭಾಸ್ಕರ್ ನಾಯಕ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಸುವರ್ಣ ಕರ್ನಾಟಕ ಹಬ್ಬವನ್ನು ವರ್ಷವಿಡೀ ಮನೆಮನೆಗಳಲ್ಲಿ ಸೇರಿದಂತೆ ಎಲ್ಲೆಡೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಕರ್ನಾಟಕ ಸುವರ್ಣ ಸಂಭ್ರಮದ ಆಚರಣೆಗೆ ಸಿದ್ಧತೆ ನಡೆಸಲಾಗಿದೆ. ಕನ್ನಡ ಭಾಷೆ, ಕರ್ನಾಟಕ ರಾಜ್ಯದ ಕುರಿತು ಮಕ್ಕಳಲ್ಲಿ ಅಭಿಮಾನ ಮೂಡಿಸಬೇಕು ಎಂಬುದು ‌ಇದರ ಹಿಂದಿನ‌ ಆಶಯವಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಹೆಬ್ಬಾಲೆ ವಲಯ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಕರ ಮಾರ್ಗದರ್ಶನಲ್ಲಿ ಉತ್ತಮ ನಡತೆ, ಸಂಸ್ಕಾರ ಕಲಿಯುವ ಮೂಲಕ ಉತ್ತಮ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಬೇಕು  ಎಂದು ಕರೆ ನೀಡಿದರು.
ಈ ಶಾಲೆಯಲ್ಲಿ ಎಸ್.ಡಿ.ಎಂ.ಸಿ. ಹಾಗೂ ಎಲ್ಲಾ ಶಿಕ್ಷಕರ ಸಮನ್ವಯತೆಯಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಉತ್ತಮಗೊಳ್ಳುತ್ತಿದೆ ಎಂದು ತಿಳಿಸಿದರು.
ಕೂಡಿಗೆ ಕ್ಲಸ್ಟರ್ ನ ಸಿ.ಆರ್.ಪಿ. ಕೆ.ಶಾಂತಕುಮಾರ್ ಮಾತನಾಡಿ, ನಾವು ದಿನನಿತ್ಯ ಮಾಡುವ ಕಾರ್ಯಗಳಲ್ಲಿ ನೆಲ- ಜಲ, ಅರಣ್ಯ, ಪರಿಸರ, ನೈರ್ಮಲ್ಯ ಹಾಗೂ ಸ್ವಚ್ಚತಾ ಕಾರ್ಯಗಳನ್ನು ಸಮರ್ಪಕವಾಗಿ ನೆರವೇರಿಸುವ ಮೂಲಕ ಕನ್ನಡ ನಾಡಿನ ಸಂಸ್ಕೃತಿ ಮತ್ತು ಪರಂಪರೆಯನ್ನು ಎತ್ತಿ ಹಿಡಿಯಬೇಕು ಎಂದರು.
ಜಾನಪದ ಕಲಾವಿದ ಕೂಡ್ಲೂರು ಗ್ರಾಮದ ಬರ್ಮಣ್ಣ ಬೆಟ್ಟಗೇರಿ ಮಾತನಾಡಿ, ವಿದ್ಯಾರ್ಥಿಗಳ ಭಾಷಾಭಿಮಾನ ಬೆಳೆಸಿಕೊಂಡು ಕನ್ನಡ ಭಾಷೆ, ಸಾಹಿತ್ಯ , ಸಂಸ್ಕೃತಿ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು ಎಂದರು.
ಎಸ್.ಡಿ.ಎಂ.ಸಿ.ಅಧ್ಯಕ್ಷ ಎ.ಎಂ.ಜವರಯ್ಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕ.ಸಾ.ಪ.ಸಮಿತಿ ಸದಸ್ಯರಾದ ಲೀಲಾಕುಮಾರಿ ತೊಡಿಕಾನ, ಡಿ.ಎಸ್.ಸೋಮಶೇಖರ್, ಗ್ರಾಮ ಪಂಚಾಯತಿ ಪಿಡಿಓ ಎಂ.ಆರ್.ಸಂತೋಷ್, ಲೆಕ್ಕಾಧಿಕಾರಿ ಎಸ್.ಎಸ್. ಮಮತ, ಸಿಬ್ಬಂದಿ ಅವಿನಾಶ್, ಎಸ್ ಡಿ ಎಂ.ಸಿ.ಮಾಜಿ ಅಧ್ಯಕ್ಷ ಎಸ್.ಎಂ.ಪುಟ್ಟಸ್ವಾಮಿ,
ಸದಸ್ಯರಾದ ಎಂ.ನಾಗರಾಜ್, ಡಿ.ವೈ. ಶೃತಿ, ಕೃಷಿಕರಾದ ಕೆ.ಎಸ್.ರಾಜಾಚಾರಿ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್ ಇತರರು ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಾದ ಕೆ.ಎಂ.ಮದನ್ ಮತ್ತು ಸ್ಪಂದನ ಕಾರ್ಯಕ್ರಮ ನಿರ್ವಹಿಸಿದರು. ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ಸ್ವಾಗತಿಸಿದರು. ವಿದ್ಯಾರ್ಥಿನಿ ಭೂಮಿಕಾ ಮತ್ತು ತಂಡದ ವತಿಯಿಂದ ಗೀತಾ ಗಾಯನ ನಡೆಸಿಕೊಡಲಾಯಿತು.
ವಿದ್ಯಾರ್ಥಿಗಳಾದ ಭೂಮಿಕ ಮತ್ತು ತಂಡದ ವತಿಯಿಂದ ನಾಡು- ನುಡಿಗೆ ಸಂಬಂಧಿಸಿದಂತೆ ಪ್ರದರ್ಶಿಸಿದ
ಜನಪದ ಹಾಗೂ ಸಾಂಸ್ಕೃತಿಕ ನೃತ್ಯ ಪ್ರೇಕ್ಷಕರ ಗಮನ ಸೆಳೆಯಿತು.
ಕಲಾವಿದ ಬರ್ಮಣ್ಣ ಬೆಟ್ಟಗೇರಿ ಗೀತೆ ಹಾಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.