Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»2ನೇ ರಾಜ್ಯ ಮರು ಸಂಘಟನೆ ಆಯೋಗ ರಚನೆಗೆ ಒತ್ತಾಯಿಸಿ ಸಿಎನ್‍ಸಿ ಧರಣಿ ಸತ್ಯಾಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

2ನೇ ರಾಜ್ಯ ಮರು ಸಂಘಟನೆ ಆಯೋಗ ರಚನೆಗೆ ಒತ್ತಾಯಿಸಿ ಸಿಎನ್‍ಸಿ ಧರಣಿ ಸತ್ಯಾಗ್ರಹ

ನವೆಂಬರ್ 1, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.1 : ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯ ಬದ್ಧವಾಗಿಲ್ಲ, ಇದರಿಂದ ಕೊಡವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಶಾಂತಿಯುತ ಧರಣಿ ಸತ್ಯಾಗ್ರಹ ನಡೆಸುವ ಮೂಲಕ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತು.
ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತತ್ತೆ ಬೇಡಿಕೆಯನ್ವಯ 2ನೇ ರಾಜ್ಯ ಮರು ಸಂಘಟನೆ ಆಯೋಗ ರಚಿಸಬೇಕೆಂದು ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರು ಒತ್ತಾಯಿಸಿದರು.
ಜಿಲ್ಲಾಡಳಿತದ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ 9 ಪ್ರಮುಖ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ ಅವರು ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ಸಲ್ಲಿಸಿ ಕೊಡವ ಲ್ಯಾಂಡ್ ಪರವಾಗಿ ಆಯೋಗವನ್ನು ರಚಿಸಬೇಕೆಂದು ಪ್ರತಿಪಾದಿಸಿದ್ದಾರೆ. ಸರ್ಕಾರಗಳು ಈ ಪ್ರಸ್ತಾಪವನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಅತ್ಯಂತ ಸೂಕ್ಷ್ಮ ಬುಡಕಟ್ಟು ಜನಾಂಗವಾಗಿರುವ ಕೊಡವರಿಗೆ ಸಾಂವಿಧಾನಿಕ ಭದ್ರತೆ ನೀಡಬೇಕೆಂದು ಆಗ್ರಹಿಸಿದರು.
ಸಂವಿಧಾನದ 7 ನೇ ತಿದ್ದುಪಡಿಯಲ್ಲಿ ಪ್ರತಿಪಾದಿಸಲಾದ ರಾಜ್ಯಗಳ ಮರು-ಸಂಘಟನಾ ಕಾಯಿದೆ 1956 ರ ಒಪ್ಪಂದಗಳಿಗೆ ಕರ್ನಾಟಕ ರಾಜ್ಯವು ಬದ್ಧವಾಗಿಲ್ಲ. “ಸಿ” ರಾಜ್ಯವಾಗಿದ್ದ ಕೂರ್ಗ್ 1956ರಲ್ಲಿ ಕರ್ನಾಟಕದೊಂದಿಗೆ ವಿಲೀನವಾದ ನಂತರ ಕೊಡವರನ್ನು ರಾಜ್ಯದ 2ನೇ ದರ್ಜೆಯ ವರ್ಣಭೇದ ನೀತಿಯ ನಾಗರಿಕರಂತೆ ಪರಿಗಣಿಸಲಾಗಿದೆ. ಇದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ನಾಚಪ್ಪ ಆರೋಪಿಸಿದರು.
ಕೊಡವರು ಕೊಡವ ಪ್ರದೇಶದ ಮೂಲನಿವಾಸಿ ಬುಡಕಟ್ಟು ಜನಾಂಗವಾಗಿದೆ. ಈ ಸೂಕ್ಷ್ಮ ಜನರ ರಕ್ಷಣೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಆದ್ದರಿಂದ ಆಂತರಿಕ ರಾಜಕೀಯ-ಸ್ವಯಂ-ನಿರ್ಣಯದ ಹಕ್ಕು, ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಸ್ವಯಂ ಆಡಳಿತ ಸೇರಿದಂತೆ ಕೊಡವರ ಪರವಾದ 9 ನ್ಯಾಯ ಸಮ್ಮತವಾದ ಬೇಡಿಕೆಗಳನ್ನು ಮಂಡಿಸುತ್ತಿರುವುದಾಗಿ ತಿಳಿಸಿದರು.
ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕು ಸಂವಿಧಾನದ ಆರ್ಟಿಕಲ್ 244 ಆರ್/ಡಬ್ಲ್ಯೂ 6 ಮತ್ತು 8 ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಯತ್ತತೆಯೊಳಗೆ ಕೊಡವ ಲ್ಯಾಂಡ್ ನ್ನು ಲಡಾಖ್ ಬೌದ್ಧ ಸ್ವಾಯತ್ತ ಹಿಲ್ ಕೌನ್ಸಿಲ್, ಅಂಡಮಾನ್‍ನ ಸೆಂಟಿನೆಲ್ ದ್ವೀಪ-ನಿಕೋಬಾರ್ ದ್ವೀಪಗಳು ಮತ್ತು ಟಿಬೆಟಿಯನ್ ಸ್ವಾಯತ್ತ ಪ್ರದೇಶ, ಒಳ ಮಂಗೋಲ್ ಸ್ವಾಯತ್ತ ಪ್ರದೇಶ ಮತ್ತು ಚೀನಾದ ಗುವಾಂಗ್‍ಕ್ಸಿಯ ಸ್ವಾಯತ್ತ ಪ್ರದೇಶಗಳ ಸಮಾನವಾಗಿ ಸಂಯೋಜಿಸಬೇಕು.
ಮೂಲನಿವಾಸಿ ಕೊಡವ ಜನಾಂಗವನ್ನು ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ಸಮಗ್ರ ಜನಾಂಗೀಯ ಅಧ್ಯಯನವನ್ನು ಆರಂಭಿಸಬೇಕು.
ಕೊಡವ ಕಸ್ಟಮರಿ ಜನಾಂಗೀಯ “ಸಂಸ್ಕಾರ ಗನ್” ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ನಮ್ಮ ಸಂವಿಧಾನದ 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ರಕ್ಷಿಸಬೇಕು. ಕೊಡವ ತಕ್ಕ್ ಭಾಷೆಯನ್ನು 8ನೇ ಶೆಡ್ಯೂಲ್‍ಗೆ ಸೇರಿಸಬೇಕು ಹಾಗೂ ಪಠ್ಯಕ್ರಮ ಮತ್ತು ಆಡಳಿತದಲ್ಲಿ ಪರಿಚಯಿಸಬೇಕು.

ಲಲಿತ ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕøತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ನಮಗೆ ಭೂಮಿಯನ್ನು ನೀಡಬೇಕು.
ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿರುವ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿ”ಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪರಿಗಣಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವಸ್ಥಾನದ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರೆ ಕೇಂದ್ರವನ್ನಾಗಿ ಮಾಡಬೇಕು.
ನಾಲ್ನಾಡಿನ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ರಾಜಕೀಯ ಹತ್ಯೆಗಳ ಸ್ಮಾರಕಗಳು, ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಳಿ ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಯುದ್ಧ ಸ್ಮಾರಕಗಳು, ದೇವಟ್ ಪರಂಬುವಿನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕಗಳನ್ನು ನಿರ್ಮಿಸಬೇಕು. ಎರಡೂ ದುರಂತಗಳನ್ನು ಯುಎನ್‍ಒ ಹತ್ಯಾಕಾಂಡದ ಸ್ಮರಣಾರ್ಥ ಪಟ್ಟಿಯಲ್ಲಿ ಸೇರಿಸಬೇಕು.
ಹೊಸ ಸಂಸತ್ತಿನಲ್ಲಿ ಪ್ರತಿನಿಧಿಸಲು ವಿಶೇಷವಾದ ಅಮೂರ್ತ ಕೊಡವ ಸಂಸದೀಯ ಮತ್ತು ಕೊಡವ ಅಸೆಂಬ್ಲಿ ಕ್ಷೇತ್ರಗಳನ್ನು ರಚಿಸಬೇಕು ಎಂದು ನಾಚಪ್ಪ ಒತ್ತಾಯಿಸಿದರು.
ಕಲಿಯಂಡ ಪ್ರಕಾಶ್, ಕಲಿಯಂಡ ಮೀನಾ ಪ್ರಕಾಶ್, ಬೊಟ್ಟಂಗಡ ಸವಿತ ಗಿರೀಶ್, ಲೆ.ಕ.ಬಿ.ಎಂ.ಪಾರ್ವತಿ, ಪಟ್ಟಮಾಡ ಲಲಿತ ಗಣಪತಿ, ಚೋಳಪಂಡ ಜ್ಯೋತಿ ನಾಣಯ್ಯ, ಕೂಪದಿರ ಪುಷ್ಪ ಮುತ್ತಣ್ಣ, ಚಂಬಂಡ ಜನತ್, ಅರೆಯಡ ಗಿರೀಶ್, ಕಾಂಡೆರ ಸುರೇಶ್, ಬೇಪಡಿಯಂಡ ದಿನು, ಬೊಟ್ಟಂಗಡ ಗಿರೀಶ್, ಕಿರಿಯಮಾಡ ಶರೀನ್, ಅಪ್ಪಿಯಂಗಡ ಮಾಲೆ, ಬೊಟ್ಟಂಗಡ ದೇವಯ್ಯ, ಮುದ್ದಂಡ ಗಪ್ಪು, ಚಂಙಂಡ ಚಾಮಿ, ಬೇಪಡಿಯಂಡ ಬಿದ್ದಪ್ಪ, ಪುಲ್ಲೇರ ಕಾಳಪ್ಪ, ನಂದಿನೆರವಂಡ ವಿಜು, ಕೂಪದಿರ ಸಾಬು, ಪಾರುವಂಗಡ ನವೀನ್, ಮಂದಪಂಡ ಮನೋಜ್, ಮಣುವಟ್ಟಿರ ಚಿಣ್ಣಪ್ಪ, ಪುಟ್ಟಿಚಂಡ ಡಾನ್ ದೇವಯ್ಯ, ಚೋಳಪಂಡ ನಾಣಯ್ಯ, ಮೇದುರ ಕಂಠಿ, ನಂದಿನೆರವಂಡ ಅಯ್ಯಣ್ಣ, ನಂದಿನೆರವಂಡ ಅಪ್ಪಯ್ಯ, ಅಜ್ಜಿನಿಕಂಡ ಸನ್ನಿ ಮಾಚಯ್ಯ ಮತ್ತಿತರರು ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಕೊಡವ ಲ್ಯಾಂಡ್ ಗಾಗಿ ಒತ್ತಾಯಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.