Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತಲಕಾವೇರಿಯಲ್ಲಿ ಕನ್ನಡ ಧ್ವಜ ಹಾರಿಸಿ ರಾಜ್ಯೋತ್ಸವವನ್ನು ಆಚರಿಸಿದ ಸಂತರು
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತಲಕಾವೇರಿಯಲ್ಲಿ ಕನ್ನಡ ಧ್ವಜ ಹಾರಿಸಿ ರಾಜ್ಯೋತ್ಸವವನ್ನು ಆಚರಿಸಿದ ಸಂತರು

ನವೆಂಬರ್ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.1 : ಕರ್ನಾಟಕದ ಜೀವನದಿ ಕಾವೇರಿ ಉಗಮತಾಣವಾದ ತಲಕಾವೇರಿಯಲ್ಲಿ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಹಾಗು ಬೇಬಿಗ್ರಾಮ ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ 68 ನೇ ರಾಜ್ಯೋತ್ಸವ ಹಾಗೂ ಕರ್ನಾಟಕ ಎಂದು ನಾಮಕರಣ ಆಗಿ 50 ವರ್ಷ ಸಂದ ಪ್ರಯುಕ್ತ ಕನ್ನಡ ಧ್ವಜವನ್ನು ಹಾರಿಸುವ ಮೂಲಕ ವಿಶೇಷವಾಗಿ ರಾಜ್ಯೋತ್ಸವವನ್ನು ಆಚರಿಸಿದರು.

ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿದ ನೂರಾರು ಭಕ್ತರಿಗೆ ಸಿಹಿ ವಿತರಿಸಿ ಕನ್ನಡವನ್ನು ಉಳಿಸಿ ಬೆಳಿಸಿ ಎಂದು ಕಿವಿಮಾತನ್ನು ಉಭಯ ಶ್ರೀಗಳು ಹೇಳಿದರು.

ಈ ಸಂದರ್ಭ ಮಾತನಾಡಿದ ಬೇಬಿ ಗ್ರಾಮ ಚಂದ್ರವನ ಆಶ್ರಮದ ಶ್ರೀ ಮ ನಿ ಪ್ರ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿ, ಕನ್ನಡ ಉಳಿಯಬೇಕು ಬೆಳೆಯಬೇಕು ಎಂದರೆ ನಾವೆಲ್ಲರೂ ಕೂಡಾ ಒಮ್ಮನಸ್ಸಿನಿಂದ ಒಟ್ಟಾರೆಯಾಗಿ ಇರಬೇಕು. ಇವತ್ತು ಕನ್ನಡನಾಡಿನ ಗಡಿ ಸಮಸ್ಯೆ , ಜಲ ಸಮಸ್ಯೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಎಂದರೆ, ಕನ್ನಡಿಗರಲ್ಲಿ ನಮ್ಮ ನಾಡಿನ ಬಗ್ಗೆ ಪ್ರೀತಿ ಸದಾ ಇರಬೇಕೆಂದರು.

ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿ ಮಾತನಾಡಿ, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಕಾವೇರಿ ನದಿ ನೀರಿನ ಸಮಸ್ಯೆ ಉಲ್ಬಣವಾಗುತ್ತಲೇ ಇದೆ. ಬೆಳಗಾವಿ ಭಾಗದಲ್ಲಿ ಗಡಿ ಸಮಸ್ಯೆ ಕೂಡ ಇದೆ. ಕನ್ನಡನಾಡಿನ ಈ ಸಮಸ್ಯೆಗೆ ಪರಿಹಾರ ಎಂದು ಎಂಬ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳುವ ಹೊಣೆಗಾರಿಕೆ ಕರ್ನಾಟಕ ಸರ್ಕಾರದ ಮೇಲಿದೆ. ಇವತ್ತು ಇಡೀ ಕರ್ನಾಟಕದ ಜನತೆ ಶಾಂತಿ ಸಮಾಧಾನ ನೆಮ್ಮದಿಯಿಂದ ಇರಬೇಕು ಎಂಬ ದೃಷ್ಟಿಕೋನದಿಂದಲೇ ತಲಕಾವೇರಿಯಲ್ಲಿ ಮಾತೆ ಕಾವೇರಿಗೆ ಪೂಜೆ, ಪ್ರಾಥ೯ನೆ ಹಮ್ಮಿಕೊಂಡಿರುವುದಾಗಿ ಹೇಳಿದರು.

ದಕ್ಷಿಣ ಕರ್ನಾಟಕದ ಮಂಡ್ಯ ಜಿಲ್ಲೆಯ ಬೇಬಿಗ್ರಾಮ ಶ್ರೀರಂಗಪಟ್ಟಣ ಚಂದ್ರವನ ಆಶ್ರಮದ ದ ಶ್ರೀ ಮ ನಿ ಪ್ರ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮಿಗಳವರು ಉತ್ತರ ಕರ್ನಾಟಕದ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳಾದ ನಾವು ಇಬ್ಬರು ಸೇರಿ ಇಡೀ ಕರ್ನಾಟಕದ ಜನತೆಗೆ ಶುಭವನ್ನು ಕೋರುವ ಅಪರೂಪದ ಕಾರ್ಯವನ್ನ ಮಾಡಿದ್ದೇವೆ ಎಂದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಕೆ.ಎಸ್. ರಮೇಶ ಹೊಳ್ಳ, ಚಂದ್ರವನ ರೋಟರಿ ಸಂಸ್ಥೆಯ ಪ್ರಮುಖರಾದ ,ಶೇಖರ ಕುಂಬಾರ ,ಸಂಜಯ ಸೇರಿದಂತೆ ಹಲವರಿದ್ದರು. ತಲಕಾವೇರಿ ತಕ್ಕಮುಖ್ಯಸ್ಥ ಕೋಡಿ ಮೋಟಯ್ಯ, ಪೊನ್ನಣ್ಣ ಸ್ವಾಗತಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.