ನಾಪೋಕ್ಲು ನ.2 : ಕರ್ನಾಟಕದ ಏಕೀಕರಣಕ್ಕಾಗಿ ಹಲವು ಗಣ್ಯರು ದುಡಿದಿದ್ದು, ಅವರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ನಿರ್ದೇಶಕ ಮಕ್ಕಿ ಸುಬ್ರಮಣ್ಯ ಹೇಳಿದರು.
ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕನ್ನಡ ಭಾಷೆಯ ಬೆಳವಣಿಗೆಗೆ ಹಲವು ಸಾಹಿತಿಗಳು ಶ್ರಮಿಸುತ್ತಿದ್ದು, ನಾಡು ಸಮೃದ್ದವಾಗಿದೆ ಎಂದರು.
ಪ್ರಾಂಶುಪಾಲರಾದ ಬಿ.ಎಂ.ಶಾರದ ಮಾತನಾಡಿ, ಮೈಸೂರು ಪ್ರಾಂತ್ಯಕ್ಕೆ ಕರ್ನಾಟಕ ರಾಜ್ಯವೆಂದು 1973 ರಲ್ಲಿ ಮರುನಾಮಕರಣ ಮಾಡಲಾಯಿತು. ಅದರ ಸುವರ್ಣ ಸಂಭ್ರಮವನ್ನು ಇಂದು ಆಚರಿಸಲಾಗುತ್ತಿದೆ ಎಂದು ದಿನದ ಮಹತ್ವದ ಬಗ್ಗೆ ಮಾತನಾಡಿದರು..
ಶಿಕ್ಷಕಿ ಸೀತಮ್ಮ ಹಾಗೂ ವಿದ್ಯಾರ್ಥಿಗಳು ದಿನದ ಮಹತ್ವದ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ವಹಿಸಿದ್ದ ಕಾರ್ಯಕ್ರಮದಲ್ಲಿ ನಿರ್ದೇಶಕರುಗಳಾದ ಬಿದ್ದಾಟoಡ ಪಾಪ ಮುದ್ದಯ್ಯ, ಬೊಳ್ಳಚೆಟ್ಟಿರ ಸುರೇಶ್, ಅಪ್ಪಾರಂಡ ಅಪ್ಪಯ್ಯ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ 14 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಬಿ.ಎಂ.ಪೆಮ್ಮಯ್ಯ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು
ವರದಿ : ದುಗ್ಗಳ ಸದಾನಂದ