ಮಡಿಕೇರಿ ನ.2 : ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ ಯು ನಗರದ ಗುಡ್ಡೆಮನೆ ಅಪ್ಪಯ್ಯ ಗೌಡರ ಪ್ರತಿಮೆ ಬಳಿ ನಡೆಯಿತು.
ನಗರದ ಕೋಟೆ ಆವರಣದಲ್ಲಿರುವ ಗುಡ್ಡಮನೆ ಅಪ್ಪಯ್ಯ ಗೌಡರ ಅವರ ಸ್ಮಾರಕಕ್ಕೆ ವೇದಿಕೆ ಸದಸ್ಯರುಗಳು ಹಾಗೂ ಸಂಘಟನೆಯ ಅಧ್ಯಕ್ಷರುಗಳು ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ. ಖಲೀಲ್ ಭಾಷಾ, ವಿಷ್ಣು ಸೇನೆ ಜಿಲ್ಲಾಧ್ಯಕ್ಷ ರಫೀಕ್( ದಾದಾ). ವೀರಭದ್ರ ಮುನೇಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ.ಮಂಜುನಾಥ್, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ಶಿವರಾಮೇ ಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರುಗಳಾದ ಜಿ.ಎನ್.ಪುನೀತ್ ಹಾಗೂ ಆದರ್ಶ್ ಸೇರಿದಂತೆ ಮತ್ತಿತರು ಪಾಲ್ಗೊಂಡಿದ್ದರು.









