ನಾಪೋಕ್ಲು ನ.2 : ಮೈಸೂರಿನ ಕೊಡಗು ಗೌಡ ಸಮಾಜ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೈಸೂರಿನ ಸಮಾಜದ ಸಾಂಸ್ಕೃತಿಕ ಸಭಾಂಗಣದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಗಣ್ಯರು ಹಾಗೂ ಸಮಾಜದ ಪ್ರಮುಖರು ಪುಷ್ಪನಮನ ಸಲ್ಲಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಮಾಜದ ಅಧ್ಯಕ್ಷ ತೋಟಂಬೈಲ್ ಮನೋಹರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಮನೆತನ ಮತ್ತು ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟದ ಸಂದರ್ಭ ಅವರನ್ನು ಅಮಾನವೀಯವಾಗಿ ಗಲ್ಲಿಗೇರಿಸಲ್ಪಟ್ಟ ಬಗ್ಗೆ ತಿಳಿಸಿದರು.
ಮೈಸೂರು ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚ೦ಡೀರ ಬಸಪ್ಪ ಮಾತನಾಡಿ, ಗುಡ್ಡೆಮನೆ ಅಪ್ಪಯ್ಯ ಗೌಡರ ಸ್ವಾತಂತ್ರ್ಯ ಪೂರ್ವ ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಹೋರಾಟ ಮತ್ತು ಗಲ್ಲಿಗೆರಿಸಲ್ಪಟ್ಟ ಸನ್ನಿವೇಶವನ್ನು ಎಳೆಯಾಗಿ ಬಿಡಿಸಿ ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜದ ಉಪಾಧ್ಯಕ್ಷರಾದ ಕುಯ್ಯಮುಡಿ ರಾಮಪ್ಪ, ಕಾಯ೯ದಶಿ೯ ಕುಂಟಿಕಾನ ಗಣಪತಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಕೊಡಗು ಗೌಡ ಮಾಜಿ ಸೈನಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಸಮಾಜದ ಸದಸ್ಯರು, ಕೊಡಗು ಗೌಡ ಕ್ಷೇಮಾಭಿವೃದ್ಧಿ ಸಂಘ ಹೂಟಗಳ್ಳಿ ಮೈಸೂರಿನ ಅಧ್ಯಕ್ಷರು, ಸದಸ್ಯರು ಹಾಗೂ ಸಮಾಜದ ಸದಸ್ಯರು ಹಾಜರಿದ್ದರು.
ಸಮಾಜ ನಿರ್ದೇಶಕ ಹೊಸೊಕ್ಲು ಸೋಮಣ್ಣ ಸ್ವಾಗತಿಸಿದರು. ಕುಂಟುಪುಣಿ ಶೀಲಾ ರಮೇಶ್ ಪ್ರಾರ್ಥಿಸಿದರು. ನಿರ್ದೇಶಕ ಕೊಂಬಾರನ ಬಸಪ್ಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ವರದಿ : ದುಗ್ಗಳ ಸದಾನಂದ.