ಮಡಿಕೇರಿ ನ.2 : ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ನ.3 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ಪೊನ್ನಂಪೇಟೆಯಲ್ಲಿ ನಡೆಯುವ ಕೃಷಿ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬೆಳಗ್ಗೆ 11.50 ಗಂಟೆಗೆ ಶ್ರೀಮಂಗಲ 66 ಕೆ.ವಿ.ವಿದ್ಯುತ್ ಉಪ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಕೃಷಿ ಪ್ರಶಸ್ತಿ ವಿಜೇತರಾದ ರವಿಶಂಕರ್ ಅವರ ಹುದ್ದೂರು ಬಳಿಯ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಸಂಜೆ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸುದ್ದಿಗೋಷ್ಠಿ(ಜಿಲ್ಲಾಧಿಕಾರಿ ಕಚೇರಿ) ನಡೆಸಲಿದ್ದಾರೆ ಎಂದು ಕೃಷಿ ಸಚಿವರ ಆಪ್ತ ಕಾರ್ಯದರ್ಶಿ ಎಚ್.ಜಿ.ಪ್ರಭಾಕರ್ ತಿಳಿಸಿದ್ದಾರೆ.









