ಮಡಿಕೇರಿ ನ.3 : ಕೃಷಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕುಶಾಲನಗರ ಪೊಲೀಸರು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಬಸವನತ್ತೂರು ಗ್ರಾಮದ ಹಾಗಲಕಾಯಿ ರಾಜ ಎಂಬಾತನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈತನ ಕೃಷಿ ಜಮೀನಿನಲ್ಲಿದ್ದ 1.62 ಕೆ.ಜಿ ಹಸಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.
ಸೋಮವಾರಪೇಟೆ ಉಪವಿಭಾಗದ ಡಿವೈಎಸ್‍ಪಿ ಆರ್.ಎ.ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‍ಐ ಮೋಹನ್ ರಾಜು ಪಿ. ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಪೊಲೀಸರ ದಕ್ಷ ಕಾರ್ಯಾಚರಣೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.









