ಮಡಿಕೇರಿ ನ.3 : ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ಆರೋಪಿಯನ್ನು ಸುಂಟಿಕೊಪ್ಪ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸುಂಟಿಕೊಪ್ಪದ ನಿವಾಸಿ ಮಧುಸೂದನ್ ಕೆ.ಕೆ(32) ಎಂಬಾತನನ್ನು 420 ಗ್ರಾಂ ಗಾಂಜಾ ಸಹಿತ ವಶಕ್ಕೆ ಪಡೆದು ತನಿಖೆ ಕೈಗೊಳ್ಳಲಾಗಿದೆ.
ಸೋಮವಾರಪೇಟೆ ಉಪವಿಭಾಗದ ಡಿವೈಎಸ್‍ಪಿ ಆರ್.ಎ.ಗಂಗಾಧರಪ್ಪ, ಸುಂಟಿಕೊಪ್ಪ ಪಿಎಸ್‍ಐ ಶ್ರೀಧರ್ ಎಂ.ಸಿ ಹಾಗೂ ಸಿಬ್ಬಂದಿಗಳ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.









