ಮಡಿಕೇರಿ ನ.3 : ಪೊನ್ನಂಪೇಟೆಯ ಹುದ್ದೂರು ಗ್ರಾಮದಲ್ಲಿ ಕೃಷಿ ಪ್ರಶಸ್ತಿ ವಿಜೇತ ರವಿಶಂಕರ್ ಅವರ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ವಿವಿಧ ತಳಿಯ ಭತ್ತದ ಬೆಳೆ ವೀಕ್ಷಿಸಿದರು.
ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಆದ್ಯತೆ ಸಿಗುತ್ತಿರುವಾಗ ವಿವಿಧ ತಳಿಗಳ ಭತ್ತ ಬೆಳೆಯುತ್ತಿರುವ ರವಿಶಂಕರ್ ಮತ್ತು ಅವರ ಸಹೋದರರ ಕಾಳಜಿ ಬಗ್ಗೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್..ಪೊನ್ನಣ್ಣ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಕೃಷಿ ನಿರ್ದೇಶಕ ಡಾ. ಜಿ.ಟಿ.ಪುತ್ರ ಹಾಗೂ ಅಧಿಕಾರಿಗಳು ಹಾಜರಿದ್ದರು.