ಪುತ್ತೂರು ನ.3 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಂಬಿಎ ವಿಭಾಗದ ವಿದ್ಯಾರ್ಥಿನಿ ಪವಿತ್ರ.ಜಿ ರಾಜ್ಯ ಮಟ್ಟದ ದಸರಾ ಸಿ.ಎಂ ಕಪ್ ಅಥ್ಲೆಟಿಕ್ ಸ್ಪರ್ಧೆ-2023 ಇದರಲ್ಲಿ ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ರಾಜ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಅಸೋಸಿಯೇಶನ್ ಮತ್ತು ಮೈಸೂರು ಜಿಲ್ಲಾಡಳಿತ ಇದರ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 12.90 ಮೀಟರ್ ದೂರ ಜಿಗಿದು ಪವಿತ್ರ ಪ್ರಥಮ ಸ್ಥಾನ ಗಳಿಸಿದ್ದಾರೆ.
ಟ್ರಿಪಲ್‌ಜಂಪ್ ಸ್ಪರ್ಧೆಯಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದಾರೆ. ಚತ್ತೀಸ್‌ಘಡದ ಬಿಲಾಸ್ಪುರದಲ್ಲಿ ನಡೆದ 23ರ ಕೆಳಗಿನ ಹರೆಯದವರ ರಾಷ್ಟ್ರೀಯ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿಯ ಪದಕ, ಕರ್ನಾಟಕ ಹಿರಿಯರ ಅತ್ಲೆಟಿಕ್ ಕ್ರೀಡಾಕೂಟ-2023 ರಲ್ಲಿ ಚಿನ್ನದ ಪದಕ, ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವನಿದ್ಯಾನಿಲಯದ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ನೂತನ ಕೂಟ ದಾಖಲೆಯೊಂದಿಗೆ ಉತ್ತಮ ಕ್ರೀಡಾಪಟು ಪ್ರಶಸ್ತಿ, ಬೆಂಗಳೂರಿನಲ್ಲಿ ನಡೆದ ಕರ್ನಾಟಕ ಅತ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನೂತನ ಕೂಟ ದಾಖಲೆಯೊಂದಿಗೆ ಚಿನ್ನದ ಪದಕವನ್ನು ಪಡೆದುಕೊಂಡಿದ್ದು, ರಾಷ್ಟ್ರಮಟ್ಟದ ಹಿರಿಯರ ಕ್ರೀಡಾಕೂಟ ಹಾಗೂ ಮುಕ್ತ ಜಿಗಿತಗಳ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರು ಪವಿತ್ರಗೆ ಮಾರ್ಗದರ್ಶನ ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*