ಮಡಿಕೇರಿ ನ.3 : ಕೃಷಿ ಇಲಾಖೆ ಕಾರ್ಯಕ್ರಮಗಳ ಸಂಬಂಧ ಕಾಲಮಿತಿಯಲ್ಲಿ ಆರ್ಥಿಕ ಹಾಗೂ ಭೌತಿಕ ಗುರಿ ಸಾಧಿಸುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಮಡಿಕೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸುವ ಮೂಲಕ ರೈತರಿಗೆ ಸಹಕಾರಿಯಾಗುವಂತೆ ಸಲಹೆ ನೀಡಿದರು.
ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಶೇ.39 ರಷ್ಟು ಮಳೆ ಕೊರತೆ ಉಂಟಾಗಿದೆ ಎಂದರು.
ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಭತ್ತ, ಮುಸುಕಿನ ಜೋಳ, ರಾಗಿ ಬಿತ್ತನೆ ಸಂಬಂಧಿಸಿದಂತೆ ಶೇ.67 ರಷ್ಟು ಪ್ರಗತಿ ಸಾಧಿಸಲಾಗಿದೆ. ಕಾಲ ಕಾಲಕ್ಕೆ ರಸಗೊಬ್ಬರ ಪೂರೈಕೆ ಮಾಡಲಾಗಿದೆ. ಹಾಗೆಯೇ ಬಿತ್ತನೆ ಬೀಜವನ್ನು ವಿತರಿಸಲಾಗಿದೆ ಎಂದು ತಿಳಿಸಿದರು.
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಪ್ರಗತಿ ಸಾಧಿಸಲಾಗಿದೆ. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕೈಗೊಳ್ಳಲಾಗಿದ್ದು, ಶೇ.90 ರಷ್ಟು ಪ್ರಗತಿ ಸಾಧಿಸಲಾಗಿದೆ. ಪಿಎಂ.ಕಿಸಾನ್ ಯೋಜನೆಯಡಿ ಇಕೆವೈಸಿ ಯಡಿ ಹೆಸರು ನೋಂದಾಯಿಸಲಾಗುತ್ತಿದೆ ಎಂದು ವಿವರಿಸಿದರು.
ರೈತರ ಆತ್ಮಹತ್ಯೆಗೆ ಸಂಬಂಧಿಸಿದಂತೆ 2019 ರಿಂದ ಇದುವರೆಗೆ 29 ಪ್ರಕರಣಗಳಲ್ಲಿ 28 ಪ್ರಕರಣಗಳಿಗೆ ಪರಿಹಾರ ವಿತರಿಸಲಾಗಿದ್ದು, ಒಂದು ಪ್ರಕರಣ ಪರಿಹಾರ ವಿತರಿಸಲು ಬಾಕಿ ಇದೆ ಎಂದು ಸೋಮಸುಂದರ ಅವರು ತಿಳಿಸಿದರು.
ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್ ಪಿ.ಗೌಡ, ಕೃಷಿ ಇಲಾಖೆಯ ನಿರ್ದೇಶಕರಾದ ಡಾ.ಜಿ.ಟಿ.ಪುತ್ರ, ಜಿ.ಪಂ ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಕೃಷಿ ಇಲಾಖೆ ಅಧಿಕಾರಿಗಳು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
Breaking News
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*