ಪುತ್ತೂರು ನ.4 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿ ಪ್ರಫುಲ್ ಯು.ಎಸ್ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ತೃತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಷಿನ್ ಲರ್ನಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು SIT ತುಮಕೂರಿನಲ್ಲಿ ನಡೆದ ಆಯ್ಕೆ ಶಿಬಿರದಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿ ವಿಶ್ವವಿದ್ಯಾನಿಲಯ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಇದೇ ನವೆಂಬರ್ 9 ರಿಂದ 12 ರವರೆಗೆ ಆಂಧ್ರಪ್ರದೇಶ ಕಾಕಿನಾಡದ ಜವಾಹರ್‌ಲಾಲ್ ನೆಹರೂ ತಾಂತ್ರಿಕ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಸುರಂಪಲೆಮ್ ಆದಿತ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುವ ದಕ್ಷಿಣವಲಯ ಅಂತರ್ ವಿಶ್ವವಿದ್ಯಾನಿಲಯ ಕಬಡ್ಡಿ ಕ್ರೀಡಾಕೂಟದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡವನ್ನು ಪ್ರಫುಲ್ ಪ್ರತಿನಿಧಿಸಲಿದ್ದಾರೆ. ಸತತ ಎರಡನೇ ಬಾರಿ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಗೊಂಡ ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.










