ಬೆಂಗಳೂರು ನ.4 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸ ಕಾವೇರಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಭಾಂಗಣವನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.
ಈ ಸಂದರ್ಭ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಎನ್.ರಾಜಣ್ಣ, ಎಂ.ಬಿ.ಪಾಟೀಲ್, ಡಾ.ಹೆಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಎನ್.ಬೋಸರಾಜು, ಸಿ.ಎಂ.ರಾಜಕೀಯ ಕಾರ್ಯದರ್ಶಿ ಗೋವಿಂದ ರಾಜು ಸೇರಿದಂತೆ ಮತ್ತಿತರರು ಇದ್ದರು.