ಗೋಣಿಕೊಪ್ಪ ನ.4 : ಅಂಕಗಳು ಒದಿಗಷ್ಟೆ ಸಿಮಿತವಾಗದೆ ಮನೋ ನೆಮ್ಮದಿ, ಮನೋ ಧೃಡತೆ ಸಿಗುವ ಹವ್ಯಾಸವನ್ನು ಬೆಳೆಸಿಕೊಂಡಗ ಸಂಭ್ರಮ, ಸಂತೋಷದ ಜೀವನ ನಡೆಸಬಹುದು ಎಂದು ಕವಿ, ಸಾಹಿತಿ ಜಗದೀಶ್ ಜೋಡುಬೀಟಿ ತಿಳಿಸಿದರು.
ಅರುವತ್ತೊಕ್ಲು ಸರ್ವದೈವತಾ ಇಂಗ್ಲಿಷ್ ಮಾದ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ತನ್ನ ಆತ್ಮಶಕ್ತಿಯನ್ನು ಅರಿತುಕೊಳ್ಳಲಾಗದಷ್ಟು ನಿಶಕ್ತಿಯಾಗಿದ್ದಾನೆ. ಕೇವಲ ಪರೀಕ್ಷೆಗಳಿಗಾಗಿ ತೊಡಗಿಸಿಕೊಳ್ಳುವ ಅಂಕದ ಓದಿನಿಂದ ಈ ವ್ಯವಸ್ಥೆಯೆಂದು ರೂಪಗೊಳ್ಳುತ್ತಿದೆ. ಹೀಗಾಗಿ ಉನ್ನತ ಪದವಿ ಶಿಕ್ಷಣವನ್ನು ಪಡೆದುಕೊಂಡಿದ್ದರೂ ಆತ್ಮಹತ್ಯೆಗೆ ಶರಣಾಗುವುದನ್ನು ಕಾಣುತ್ತಿದ್ದೇವೆ. ಓದುವ ಹವ್ಯಾಸದ ಜತೆಗೆ ಕ್ರೀಡೆ, ಸಂಸ್ಕೃತಿ, ಸಾಹಿತ್ಯ ಇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಾಗ ಬದುಕಲು ಬೇಕಾದ ದೃಢತೆಯನ್ನು ಕಲ್ಪಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಅದನ್ನು ಹೊರಗೆಡವಲು ಉತ್ತಮ ವೇದಿಕೆ ಅವಶ್ಯಕತೆ ಇದೆ. ಅಂತಹ ವೇದಿಕೆಯನ್ನು ಅರುವತ್ತೂಕ್ಲು ಸರ್ವದೈವತ ಶಾಲೆ ಸೃಷ್ಟಿಸುತ್ತಿದೆ. ಜಾತ್ಯತೀತವಾಗಿ ನಿಂತು ಅಕ್ಷರ ಬಿತ್ತುವುದರ ಜತೆಗೆ ಈ ನೆಲದ ಕಲೆ, ಸಾಹಿತ್ಯ, ಕ್ರೀಡೆ, ಸಂಸೃತಿಯನ್ನು ವಿದ್ಯಾರ್ಥಿಗಳಿಗೆ ಪರಿಚಯುಸುತ್ತಿದೆ ಎಂದು ಹೇಳಿದರು.
ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ಕಾಡ್ಯಮಾಡ ಪ್ರಕಾಶ್ ಮಾತನಾಡಿ, ಪ್ರತಿಯೊಬ್ಬ ಮಕ್ಕಳಿಗೂ ವಿದ್ಯೆಯ ಜೊತೆಗೆ ಬದುಕುವ ಕಲೆಯನ್ನು ತಿಳಿಸಿಕೊಡಬೇಕೆಂಬ ನಿಟ್ಟಿನಲ್ಲಿ ವಿದ್ಯಾ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಈ ನೆಲೆಯಲ್ಲಿ ರಾಜ್ಯಮಟ್ಟದ ಮತ್ತು ಜಿಲ್ಲಾ ಮಟ್ಟದ ಚೆಸ್ಸ್ ಪಂದ್ಯಾಟವನ್ನು ಆಯೋಜಿಸಿದೆ. ಪ್ರತಿಯೊಬ್ಬ ಮಕ್ಕಳಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇದೆ ಅದನ್ನ ಹೊರ ತರಬೇಕು ಎಂಬ ಉದ್ದೇಶದೊಂದಿಗೆ ಪ್ರತಿ ಶಿಕ್ಷಕರು ಈ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದರು.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಪೊನ್ನಿಮಾಡ ಪ್ರದೀಪ್ ಮಾತನಾಡಿ, ಕ್ರೀಡೆ, ಕಲೆ, ಸಂಗೀತ, ಸಾಹಿತ್ಯ ಚಟುವಟಿಕೆಯಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ವರ್ಷವೂ ಶಾಲೆಯಲ್ಲಿ ವಿವಿಧ ಚಟುವಟಿಕೆಗಳನ್ನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮನೆಯಪಂಡ ಶೀಲಾ ಬೊಪ್ಪಣ್ಣ ಮಾತನಾಡಿ, ಈ ದೇಶದ ಭವಿಷ್ಯ ವಿದ್ಯಾರ್ಥಿಗಳು. ಅವರಲ್ಲಿರುವ ವಿವಿಧ ಕಲಾತ್ಮಕಗಳನ್ನು ಹೊರತಂದು ವೇದಿಕೆ ನಿರ್ಮಿಸುವುದು ಉದ್ದೇಶ. ಈ ರೀತಿಯಿಂದ ಓದುವ ಚಟುವಟಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಮತ್ತು ಮಕ್ಕಳ ಭೌತಿಕ, ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಬಲ್ಲದು ಎಂದು ಹೇಳಿದರು.
ಸಂಸ್ಥೆಯ ಶಿಕ್ಷಕರು ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಪೋಷಕರು ಹಾಜರಿದ್ದರು.
Breaking News
- *ಸುಂಟಿಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*