ವಿರಾಜಪೇಟೆ ನ.4 : ಓದುವ ಹವ್ಯಾಸವು ಬದುಕನ್ನು ಸುಂದರಗೊಳಿಸುತ್ತದೆ ಎಂದು ಮಡಿಕೇರಿಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಅಭಿಪ್ರಾಯಪಟ್ಟರು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಪರಿಶ್ರಮದಿಂದ ಅಭ್ಯಸಿಸಬೇಕು. ಕಾಲೇಜಿನಲ್ಲಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದರು.
ವಿದ್ಯಾರ್ಥಿಗಳ ಸೂಪ್ತ ಪ್ರತಿಭೆಯನ್ನು ಹೊರ ತೆಗುಯುವುದೇ ಕಾಲೇಜಿನ ಉದ್ದೇಶವಾಗಿರುತ್ತದೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುದರ ಜೊತೆಗೆ ನೆಲ, ಜಲ, ಭಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸಬೇಕು. ಎಲ್ಲರೂ ಸಮಾನರೆಂಬ ಭಾವನೆ ಹೊಂದಬೇಕು ಎಂದು ತಿಳಿಸಿದರು.
ಕರ್ನಾಟಕ ಭಾಷಾ ಅಲ್ಪ ಸಂಖ್ಯಾತರ ಒಕ್ಕೂಟದ ಅಧ್ಯಕ್ಷ ಪ್ರತೀಕ್ ಪೊನ್ನಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ಅಗತ್ಯ ಎಂದ ಅವರು, ಯುವಕರು ರಾಷ್ಟ್ರದ ಏಳಿಗೆಗಾಗಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ವಿದ್ಯಾರ್ಥಿಗಳು ಶಿಸ್ತು ನಿಯಮಗಳನ್ನು ರೂಪಿಸಿಕೊಂಡು ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ವೇದಿಕೆಯಲ್ಲಿ ಕ್ರೀಡಾ ಸಂಚಾಲಕಿ ರಾಖಿ ಪೂವಣ್ಣ, ಸಾಂಸ್ಕೃತಿಕ ಸಂಚಾಲಕ ಡಾ. ಕೆ.ಬಸವರಾಜು. ಐಕ್ಯೂಎಸಿ ಸಂಚಾಲಕ ನಾಗರಾಜಮೂರ್ತಿ ಹಾಜರಿದ್ದರು.
ಡಾ. ಬಸವರಾಜು ಸ್ವಾಗತಿಸಿದರು. ವೇಣುಗೋಪಾಲ್ ವಂದಿಸಿದರು. ವಿದ್ಯಾರ್ಥಿನಿ ಧನ್ಯ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*