ಮಡಿಕೇರಿ ನ.5 : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 140 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸುಂದರ ನಗರದಿಂದ ಕೂಡ್ಲೂರು ರಸ್ತೆಯಲ್ಲಿ ಗಾಂಜಾ ದಂಧೆ ನಡೆಯುತ್ತಿರುವ ಕುರಿತು ದೊರೆ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.
ಕುಶಾಲನಗರದ ನಿವಾಸಿಗಳಾದ ಗಣೇಶ (24) ಹಾಗೂ ದೀಪು (24) ಅವರುಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಸಿದ್ದಾರೆ.
ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಜಗದೀಶ್.ಎಂ, ಕುಶಾಲನಗರ ಪಿಎಸ್‌ಐ ಮೋಹನ್ ರಾಜು.ಪಿ ಹಾಗೂ ಸಿಬ್ಬಂದಿಗಳ ತಂಡವನ್ನು ರಚಿಸಿ ತನಿಖೆ ಕೈಗೊಂಡು ದಾಳಿ ನಡೆಸಲಾಯಿತು.
ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ದಕ್ಷ ಕಾರ್ಯಾಚರಣೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.











