ವಿರಾಜಪೇಟೆ ನ.6 : ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು.
ಮುಂಬೈ ಯ ಬಜಾಜ್ ಫಿಂಸೆರ್ವ್ ಕಂಪನಿ ವತಿಯಿಂದ ವಿರಾಜಪೇಟೆ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯವು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ ತರಬೇರಿ ಪಡೆಯಬೇಕು ಎಂದರು. ಆ ಮೂಲಕ ಸೂಕ್ತ ಉದ್ಯೋಗದ ಆಯ್ಕೆ ಮಾಡಬಹುದು ಎಂದು ತಿಳಿಸಿದರು.
ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕೌಶಲ್ಯ ಆಧಾರಿತ ಉದ್ಯೋಗ ಇಂದು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ತರಬೇತಿ ಪಡೆಯುವಂತಾಗಲು ಈ ಕಾರ್ಯಕ್ರಮವನ್ನು ಎಂ. ಓ. ಯು ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ತರಬೇತುದಾರೆ ಬಜಾಜ್ ಫಿಂಸೆರ್ವ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರಶ್ಮಿ ಮನ್ಸುಖಾನಿ, ಐಕ್ಯೂಎಸಿ ಸಂಚಾಲಕಿ ಹೇಮ, ವಾಣಿಜ್ಯ ವಿಭಾಗ ಮುಖ್ಯಸ್ಥೆ ದೃಶ್ಯ ಹಾಜರಿದ್ದರು. ವಿದ್ಯಾರ್ಥಿನಿ ದಿಯಾ ನಿರೂಪಿಸಿದರು.
ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಹಣಕಾಸು, ಇನ್ಸೂರೆನ್ಸ್ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಈ ಸರ್ಟಿಫಿಕೇಟ್ ಕೋರ್ಸ್ ನಡೆಯಿತು.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*