ಮಡಿಕೇರಿ ನ.6 : ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಡಹಗಲೇ ಕಾಡಾನೆ ಸಂಚರಿಸುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.
ಸೋಮವಾರ ಬೆಳಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ಕೈಲಾಶ ಆಶ್ರಮ ಬಳಿಯ ತಲಕಾವೇರಿ ಪ್ರವೇಶ ದ್ವಾರದ ಭಾಗದಲ್ಲಿ ಕಾಡಾನೆ ತಿರುಗಾಡಿದೆ. ದ್ವಾರದ ಗೇಟ್ ಬಂದ್ ಮಾಡಿದ್ದರಿಂದ ಆನೆಗೆ ತಲಕಾವೇರಿ ಒಳಗೆ ಪ್ರವೇಶಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇದು ತುಲಾಮಾಸ ಕಾವೇರಿ ಜಾತ್ರೆಯ ಅವಧಿಯಾಗಿದ್ದು, ಪ್ರತಿದಿನ ಸಾವಿರಾರು ಭಕ್ತರು ತಲಕಾವೇರಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಸುತ್ತಲೂ ಬೆಟ್ಟ, ಕಾಡುಗಳಿಂದ ಆವೃತ್ತವಾಗಿರುವ ಈ ಪ್ರದೇಶದಲ್ಲಿ ಏಕಾಏಕಿ ಕಾಡಾನೆಗಳು ನುಗ್ಗಿ ಬಂದರೆ ಅಪಾಯ ತಪ್ಪಿದ್ದಲ್ಲ ಎನ್ನುತ್ತಾರೆ ಗಾಮಸ್ಥರು.
ಈಗಾಗಲೇ ಕಾಡಾನೆ ಏಲಕ್ಕಿ ಮತ್ತು ಬಾಳೆ ಫಸಲನ್ನು ನಾಶಪಡಿಸಿದೆ. ಆನೆಯನ್ನು ಓಡಿಸುವಂತೆ ಈ ಭಾಗದ ನಿವಾಸಿಗಳು ಒತ್ತಾಯಿಸಿದ ಹಿನ್ನೆಲೆ ಕಾರ್ಯಾಚರಣೆ ನಡೆಸಿದ ಅರಣ್ಯ ಸಿಬ್ಬಂದಿಗಳು ಪಕ್ಕದ ಕಾಡಿನಲ್ಲಿ ಆನೆ ಇರುವುದನ್ನು ಪತ್ತೆ ಹಚ್ಚಿದರು. ನಂತರ ಸ್ಥಳೀಯರ ಸಹಕಾರ ಪಡೆದು ಕಾಡಾನೆಯನ್ನು ಮರಳಿ ಕಾಡಿಗೆ ಅಟ್ಟುವಲ್ಲಿ ಸಫಲರಾದರು.
Breaking News
- *ಕರ್ನಾಟಕ ಉಪ ಚುನಾವಣೆ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ*
- *ಮಿಸ್ಟಿ ಹಿಲ್ಸ್ ನಿಂದ ಮಕ್ಕಳಿಗೆ ಸಾಹಸಕ್ರೀಡೆ*
- *ವಿಟಿಯು ರಾಜ್ಯಮಟ್ಟದ ಕಬಡ್ಡಿ : ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ*
- *ವೀರ ಸೇನಾನಿಗಳಿಗೆ ಅಗೌರವ : ಆಮ್ ಆದ್ಮಿ ಪಾರ್ಟಿ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ*
- *ವಿರಾಜಪೇಟೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯಿಂದ ಸ್ಥಳ ಪರಿಶೀಲನೆ*
- *ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಲರವ*
- *ಕಬ್ಬಚ್ಚಿರ ರಶ್ಮಿ ಕಾರ್ಯಪ್ಪಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ*
- *ಬೋಯಿಕೆರಿ ಅಂಗನವಾಡಿಯಲ್ಲಿ ನಿವೃತ್ತ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ : ಸಂಸ್ಕಾರವಂತ ಸಮಾಜ ನಿರ್ಮಾಣದ ರೂವಾರಿಗಳು ಅಂಗನವಾಡಿ ತಾಯಂದಿರು : ತೆನ್ನಿರ ಮೈನಾ ಶ್ಲಾಘನೆ*
- *ವ್ಯಾoಡಮ್ ಎಂಟರ್ಪ್ರೈಸಸ್ ನ ವಾರ್ಷಿಕೋತ್ಸವ : ನ.24 ರಂದು ಲಕ್ಕಿ ಡ್ರಾ ಸಮಾರಂಭ*