ಪುತ್ತೂರು ನ.7 : ನಗರದ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯು ಯಶಸ್ವಿಯಾಗಿ ನಡೆಯುತ್ತಿದ್ದು, ಸಾಫ್ಟ್ ವೇರ್ ಕಂಪೆನಿಗಳಾದ ಯುನಿಕೋರ್ಟ್, ಎಕ್ಸಾಲ್ಕಾ ಟೆಕ್ನಾಲಜೀಸ್, ಇನ್ನೋಸಾಲ್ವ್ ಐಟಿ ಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಕಂಪ್ಯೂಟರ್ ಸೈನ್ಸ್ ಹಾಗೂ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಈ ನೇಮಕಾತಿ ಪ್ರಕ್ರಿಯೆಯು ನಡೆದಿದ್ದು 12 ವಿದ್ಯಾರ್ಥಿಗಳು ಆಯ್ಕೆಗೊಂಡು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಚೈತ್ರ.ಬಿ, ರಾಹುಲ್.ಎಚ್.ರಾಜ್, ಸೀಮಂತ್ ಕುಮಾರ್, ನಿವೀತ.ಬಿ, ಶ್ರಾವ್ಯ.ಎಂ, ಮೆಲಿಟಾ ಪಾಯಸ್, ತ್ರಿಶಾ.ಬಿ.ಭಟ್, ಅನನ್ಯ.ಡಿ.ಆರ್, ಅನ್ವಿತಾ ಸಾವಿತ್ರಿ, ಸಮೀಕ್ಷ, ಅರ್ಪಿತಾ.ಸಿ.ಎಲ್ ಮತ್ತು ಯತಿಕಾ.ಎಂ ಆಯ್ಕೆಗೊಂಡ ವಿದ್ಯಾರ್ಥಿಗಳು
ಕಾಲೇಜಿನ ತರಬೇತಿ ಮತ್ತು ನೇಮಕಾತಿ ವಿಭಾಗವು ಅವಿರತವಾಗಿ ಶ್ರಮಿಸುತ್ತಿದ್ದು, ಇನ್ನೂ ಹೆಚ್ಚಿನ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿವೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*