ಬೆಂಗಳೂರು ನ.7 : ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳಡಿ ರೂ.389 ಕೋಟಿ ಬಿಲ್ ಬಾಕಿ ಇದ್ದು, ಈ ಬಿಲ್ ಬಾಕಿಯನ್ನು ನಮ್ಮ ಸರ್ಕಾರ ಮನ್ನಾ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬಾಕಿಯಿಂದಾಗಿ ಈ ಯೋಜನೆಗಳ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲು ತೊಂದರೆ ಆಗುತ್ತಿತ್ತು. ಆದ್ದರಿಂದ ನಮ್ಮ ಸರ್ಕಾರವು ಬಾಕಿ ಮೊತ್ತವನ್ನು ಮನ್ನಾ ಮಾಡುವ ಮೂಲಕ ಕುಟುಂಬಗಳ ಮೇಲಿದ್ದ ಆರ್ಥಿಕ ಹೊರೆಯನ್ನು ಇಳಿಸಿದೆ ಎಂದು ಹೇಳಿದರು.
ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ ಹಿಂದೆ 18 ಯೂನಿಟ್ಗಳ ಮಿತಿಯಿತ್ತು. ಅದನ್ನು 40 ಯೂನಿಟ್ಗಳಿಗೆ ನಮ್ಮ ಸರ್ಕಾರ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಯೋಜನೆ ಜಾರಿಯ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಈ ಯೋಜನೆಯಡಿ ಸೇರಿಸಿ, 58 ಯೂನಿಟ್ವರಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದರು.