ಸೋಮವಾರಪೇಟೆ ನ.7 : ಉದ್ಯೋಗಕ್ಕೆ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ಬದುಕಿಗೆ ಸಾಮಾನ್ಯ ಜ್ಞಾನವೂ ಅಷ್ಟೇ ಮುಖ್ಯ ಎಂದು ಸಾಂದೀಪನಿ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಲಿಖಿತ್ ದಾಮೋದರ್ ತಿಳಿಸಿದರು.
ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ವತಿಯಿಂದ ಸಾಂದೀಪನಿ ಶಾಲೆಯ ಆವರಣದಲ್ಲಿ ಆಯೋಜಿಸಿದ್ದ ಅಂತರ ಶಾಲಾ ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಸ್ಪರ್ಧಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಂದು ನಾವು ಪ್ರಮುಖವಾಗಿ ಉದ್ಯೋಗಕ್ಕಾಗಿ ಶಿಕ್ಷಣಕ್ಕೆ ಆದ್ಯತೆ ಕೊಡುತ್ತಿದ್ದೇವೆ. ಆದರೆ ಬದುಕಿನಲ್ಲಿ ಸಾಮಾನ್ಯ ಜ್ಞಾನವೆಂಬದು ಇಲ್ಲವಾದರೆ ಜೀವನ ಕಷ್ಟವಾಗುತ್ತದೆ ಎಂದರು.
ರಾಮಕೃಷ್ಣ ವಿದ್ಯಾಶಾಲೆ ಆರಂಭಗೊಂಡು 50 ವರ್ಷ ವಾಗಿರುವ ಸಂದರ್ಭ ಅಂದಿನ ಗುರುಗಳಾಗಿದ್ದ ಶಂಭವಾನಂದಜಿ ಅವರ ಜ್ಞಾಪಕಾರ್ಥ ರಾಜ್ಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಾಂತ ಏಕಕಾಲದಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.
ರಾಜ್ಯದ 732 ಕೇಂದ್ರಗಳಲ್ಲಿ ಒಟ್ಟು 17241 ವಿದ್ಯಾರ್ಥಿಗಳು ಪಾಲ್ಗೊಳ್ಳುತ್ತಿದ್ದು, ಕೊಡಗು ಜಿಲ್ಲೆಯಲ್ಲಿ 100 ಮಂದಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಪತ್ರಿಕಾ ಭವನದ ಅಧ್ಯಕ್ಷ ಎಸ್.ಮಹೇಶ್ ಚಾಲನೆ ನೀಡಿದರು. ರಾಮಕೃಷ್ಣ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳಾದ ಎಂ. ಟಿ.ದಾಮೋದರ್, ವಿಕ್ರಂ, ಬಿ.ಎಸ್.ಸುದೀಪ್, ಬಿ.ಎಸ್.ಸಿದ್ದಾರ್ಥ್ ಹಾಗೂ ಮತ್ತಿತರರು ಹಾಜರಿದ್ದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*