ಮಡಿಕೇರಿ ನ.8 : ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಮಾಜಿ ಸೈನಿಕ, ನಗರದ ಉಕ್ಕುಡ ನಿವಾಸಿ ಸಂದೇಶ್(38) ಅವರ ಮೃತದೇಹ ಸಮೀಪದ ಪಂಪಿನ ಕೆರೆಯಲ್ಲಿ ಪತ್ತೆಯಾಗಿದೆ. ಒಟ್ಟು ಪ್ರಕರಣದ ಕುರಿತು ತನಿಖೆ ನಡೆಸಲು ವಿಶೇಷ ತಂಡ ರಚಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಪಂಪಿನ ಕೆರೆ ಬಹಳ ಆಳವಾಗಿದ್ದು, ಹುಡುಕಾಟ ಕಷ್ಟ ಸಾಧ್ಯವಾದ ಹಿನ್ನೆಲೆಯಲ್ಲಿ ಮಂಗಳೂರಿನ ಆಳ ಸಮುದ್ರ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರನ್ನು ಸಂಜೆ ಮಡಿಕೇರಿಗೆ ಕರೆಸಲಾಗಿತ್ತು. ಪಂಪಿನ ಕೆರೆಯಲ್ಲಿ ರಾತ್ರಿ ಶೋಧ ಕಾರ್ಯಾಚರಣೆ ನಡೆಸಲು ಅನುಕೂಲವಾಗುವಂತೆ ಬೆಳಕಿನ ವ್ಯವಸ್ಥೆಯನ್ನೂ ಮಾಡಲಾಗಿತ್ತು. ರಾತ್ರಿ ಸುಮಾರು 8.30 ಗಂಟೆಗೆ ಈಶ್ವರ್ ಮಲ್ಪೆ ಅವರ ಕಾರ್ಯಾಚರಣೆಯ ಮೂಲಕ ಮೃತದೇಹವನ್ನು ಮೇಲೆತ್ತಲಾಯಿತು.
ಉಕ್ಕುಡದ ಪಂಪಿನ ಕೆರೆಯ ದಂಡೆ ಮೇಲೆ ಸಂದೇಶ್ ಅವರಿಗೆ ಸೇರಿದ ಚಪ್ಪಲಿ ಮತ್ತು ವಾಚ್ ಕಂಡು ಬಂದ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಸಿಬ್ಬಂದಿಗಳು ಶೋಧ ಕಾರ್ಯ ನಡೆಸಿದರು. ನಗರ ಪೊಲೀಸ್ ಇಲಾಖೆ ಮನವಿ ಹಿನ್ನೆಲೆಯಲ್ಲಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬುಧವಾರ ಬೆಳಗ್ಗೆ 9.30 ಗಂಟೆಯಿಂದ ಸಂಜೆವರೆಗೂ ಕೆರೆಯಲ್ಲಿ ಶೋಧ ನಡೆಸಿದರು. ನೀರಿನಲ್ಲಿ ಮುಳುಗಿ ಮೃತಪಟ್ಟ ನೂರಾರು ಮೃತದೇಹಗಳನ್ನು ನೀರಿನ ಆಳ ಪ್ರದೇಶದಿಂದ ಹೊರ ತೆಗೆಯುವ ತಜ್ಞರಾಗಿರುವ ಕುಶಾಲನಗರದ ರಾಮಕೃಷ್ಣ, ಅಗ್ನಿ ಶಾಮಕ ದಳದ ಮುತ್ತಪ್ಪ ಕೂಡ ಮಡಿಕೇರಿಗೆ ಆಗಮಿಸಿ ಪಂಪಿನಕೆರೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಸಂಜೆ ಕತ್ತಲಿನವರೆಗೂ ನೀರಿನಲ್ಲಿ ಶೋಧ ನಡೆಸಿದರೂ ಸಂದೇಶ್ ಅವರ ಯಾವುದೇ ಸುಳಿವು ಲಭ್ಯವಾಗಿರಲಿಲ್ಲ.
ಈ ಕಾರಣದಿಂದ ಅನಿವಾರ್ಯವಾಗಿ ಈಶ್ವರ್ ಮಲ್ಪೆ ಅವರನ್ನು ಕರೆಸಿ ಕಾರ್ಯಾಚರಣೆ ನಡೆಸಲಾಯಿತು.
::: ಹನಿಟ್ರ್ಯಾಪ್ ಆರೋಪ :::
ನಿವೃತ್ತ ಯೋಧ ಸಂದೇಶ್ ನಾಪತ್ತೆಯಾಗುವ ಮುನ್ನ ಡೆತ್‌ನೋಟ್ ಬರೆದಿಟ್ಟಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆದಿದ್ದಾರೆ. ಮಹಿಳೆಯೊಬ್ಬರ ಹೆಸರು ಉಲ್ಲೇಖಿಸಿ “ಹನಿಟ್ರ್ಯಾಪ್ ಮಾಡಿ ನನ್ನನ್ನು ಬ್ಲಾಕ್ ಮೇಲ್ ಮಾಡಿದ್ದಾರೆ. ಜೊತೆಗೆ ಆಕೆಯ ತಾಯಿ ಹಾಗೂ ತಂಗಿ ಕೂಡ ಬ್ಲಾಕ್ ಮೇಲ್ ಮಾಡಿದ್ದಾರೆ. ಮಹಿಳೆಯ ಪರಿಚಯಸ್ಥರು ಕೂಡ ನನಗೆ ಟಾರ್ಚರ್ ಮಾಡಿದ್ದಾರೆ” ಎಂದು ಸಂದೇಶ್ ಡೆತ್‌ನೋಟ್‌ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಪೊಲೀಸ್ ಸಿಬ್ಬಂದಿ ಹಾಗೂ ರೆಸಾರ್ಟ್ ಮಾಲೀಕರೊಬ್ಬರ ಹೆಸರನ್ನು ಕೂಡ ಉಲ್ಲೇಖಿಸಿದ್ದಾರೆ.
ಮಹಿಳೆ ನೀಡಿದ ಕಿರುಕುಳದ ಕುರಿತು ಸಂದೇಶ್ ಅವರ ಪತ್ನಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ವಿಶೇಷ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*