ಮಡಿಕೇರಿ ನ.9 : ನಾವೀನ್ಯತೆ ಕ್ಷೇತ್ರ –2, ತಾರ್ಕಿಕ ಸಾಧನೆಗಳು-2 ಈ ಎರಡು ವಿಭಾಗದಲ್ಲಿ ತಲಾ 2 ರಂತೆ ಒಟ್ಟು 4 ಪ್ರಶಸ್ತಿಗಳನ್ನು ನೀಡಲಾಗುವುದು. ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ಜುಲೈ 31 ಕ್ಕೆ) ಮಕ್ಕಳನ್ನು 2023-24 ನೇ ಸಾಲಿಗೆ ಜಿಲ್ಲಾ ಮಟ್ಟದ ಪ್ರತಿಭಾಪುರಸ್ಕಾರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ಜಿಲ್ಲಾ ಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿರುತ್ತದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಈ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಅಸಾಧಾರಣವೆಂದು ಗುರುತಿಸಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವುದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವುದಿಲ್ಲ.
2023-24 ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ನವೆಂಬರ್ 10 ರೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ
(ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆ : 9482194105, 9535626053) ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ತಿಳಿಸಿದ್ದಾರೆ.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*