Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನ.15 ರಿಂದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ : ಅಗತ್ಯ ಜಾಗೃತಿಗೆ ವರ್ಣಿತ್ ನೇಗಿ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನ.15 ರಿಂದ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ : ಅಗತ್ಯ ಜಾಗೃತಿಗೆ ವರ್ಣಿತ್ ನೇಗಿ ಸೂಚನೆ*

ನವೆಂಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.9 : ವಿವಿಧ ಇಲಾಖೆಗಳಿಗೆ ತಾರೀಖುವಾರು ನಿಗದಿಪಡಿಸಿರುವ ಚಟುವಟಿಕೆಗಳನ್ನು ಸಮರ್ಪಕವಾಗಿ ಕೈಗೊಂಡು ಅವುಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ಸಲ್ಲಿಸುವಂತೆ ಕೊಡಗು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಸೂಚಿಸಿದರು.
ಆರೋಗ್ಯ ಇಲಾಖೆ ಮತ್ತು ವಿವಿಧ ಇಲಾಖೆಗಳ ಜೊತೆಗೆ ನಗರದ ಜಿ.ಪಂ.ಕಚೇರಿಯಲ್ಲಿ ನಡೆದ ‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ’ ಕಾರ್ಯಕ್ರಮವು ನ.15 ರಿಂದ 28 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ನಿಯಮಾನುಸಾರ ಇಲಾಖೆಗಳು ನಿಗದಿಪಡಿಸಿರುವ ಚಟುವಟಿಕೆಗಳನ್ನು ಅದೇ ದಿನಾಂಕಗಳಂದು ಕೈಗೊಳ್ಳಬೇಕು. ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೋಷ್ಟರ್‌ಗಳನ್ನು ಎಲ್ಲಾ ಅಂಗನವಾಡಿಗಳಲ್ಲಿಯೂ ಪ್ರಚುರಪಡಿಸಬೇಕು ಎಂದರು.
ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್  ಮಾತನಾಡಿ ತೀವ್ರತರ ಅತಿಸಾರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಒಆರ್‍ಎಸ್ ಮತ್ತು ಜಿಂಕ್ ಮಾತ್ರೆಗಳನ್ನು ಆಶಾ ಕಾರ್ಯಕರ್ತೆಯರು ಪ್ರತಿ ಗ್ರಾಮದ 0-5 ವರ್ಷದ ಒಳಗಿನ ಮಕ್ಕಳಿರುವ ಮನೆಗೆ ನೀಡಲಿದ್ದಾರೆ. ಅಲ್ಲದೆ ಕೈತೊಳೆಯುವ ಬಗ್ಗೆ ಪ್ರಾತ್ಯಕ್ಷಿಕೆಯನ್ನು ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಶಾಲೆಗಳಲ್ಲಿ ಶಿಕ್ಷಣ ಇಲಾಖೆಯು ಅಗತ್ಯ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಯಾವುದೇ ಮಗು ನಿರ್ಜಲೀಕರಣದಿಂದಾಗಿ ಸಾವಿಗೀಡಾಗಬಾರದು. ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ಗ್ರಾಮ ಮಟ್ಟದಲ್ಲಿಯೇ ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.
ಜಿಲ್ಲೆಯಲ್ಲಿ ಮತ್ತು ಜಿಲ್ಲಾ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಕಷ್ಟು ಪ್ರಮಾಣದ ಒಆರ್‍ಎಸ್ ಮತ್ತು ಜಿಂಕ್ ಮಾತ್ರಗಳ ದಾಸ್ತಾನು ಇದೆ. ಜಿಲ್ಲೆಯಾದ್ಯಂತ ವಿವಿಧ ಹಂತಗಳಲ್ಲಿ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳು ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಜಿ.ಪಂ.ಸಿಇಒ ವರ್ಣಿತ್ ನೇಗಿ, ಕೈತೊಳೆಯುವ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಯಶಸ್ವಿಯಾಗಿ ನಡೆಸಬೇಕು. ಬಾಲ್ಯದಿಂದಲೇ ಮಕ್ಕಳಿಗೆ ಸ್ವಚ್ಛತೆಯ ಕುರಿತಾಗಿ ಅರಿವು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಮನ್ವಯತೆಯಿಂದ ಕೆಲಸ ನಿರ್ವಹಿಸಬೇಕು. ಬಿಸಿಎಂ, ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿಯೂ ಸಹ ಕಡ್ಡಾಯವಾಗಿ ಕಾರ್ಯಕ್ರಮ ಆಚರಿಸಬೇಕು. ವಿಶ್ವ ಆರೋಗ್ಯ ಸಂಸ್ಥೆಯಿಂದ ಕೈತೊಳೆಯುವ ಕುರಿತಾಗಿ ಬಿಡುಗಡೆ ಮಾಡಿರುವ ವಿಡಿಯೋವನ್ನು ಹೆಚ್ಚಾಗಿ ಎಲ್ಲರಿಗೂ ತಲುಪಿಸಬೇಕು. ನಗರಸಭಾ ವ್ಯಾಪ್ತಿಯಲ್ಲಿ ಕಸವಿಲೇವಾರಿ ವಾಹನಗಳ ಮುಖಾಂತರ ಈ ಬಗ್ಗೆ ಹೆಚ್ಚಿನ ಪ್ರಚಾರ ನೀಡುವಂತೆ ನಗರಸಭೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮಾತನಾಡಿ ಅನಿಮಿಯ ಮುಕ್ತ ಭಾರತ ಅಭಿಯಾನದ ಅಂಗವಾಗಿ ನ.15 ರಿಂದ ರಕ್ತಹೀನತೆ ಮುಕ್ತ ಪೌಷ್ಟಿಕ ಕರ್ನಾಟಕ ಕಾರ್ಯಕ್ರಮ ಆರಂಭವಾಗಲಿದ್ದು, ವಿವಿಧ ಹಂತಗಳಲ್ಲಿ ಕಾರ್ಯಕ್ರಮ ಜರುಗಲಿದೆ. 0-19 ವರ್ಷದೊಳಗಿನ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚಾಗಿ ಕಂಡುಬರುವುದರಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಕಾರ್ಯಕ್ರಮ ಜರುಗಲಿದೆ ಎಂದು ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.