ಮಡಿಕೇರಿ ನ.9 : ನಾಪೋಕ್ಲುವಿನ ನೂರಂಬಡನಾಡ್ ಬೆತ್ ಮಂದ್ ನಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಗಾಗಿ ಒತ್ತಾಯಿಸಿ ಪಾದಯಾತ್ರೆ ಮತ್ತು ಕೊಡವ ಜಾಗೃತಿ ಸಭೆ ನಡೆಸಿತು.
ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ನಾಪೋಕ್ಲು ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ ಮಾನವ ಸರಪಳಿ ನಿರ್ಮಿಸಿದ ಪ್ರಮುಖರು ಕೊಡವ ಲ್ಯಾಂಡ್ ಪರ ಘೋಷಣೆಗಳನ್ನು ಕೂಗಿದರು. ಕೊಡವ ಸಾಂಪ್ರದಾಯಿಕ ಉಡುಪಿನಲ್ಲಿ ಕೋವಿಯೊಂದಿಗೆ ನೂರಂಬಡನಾಡ್ ಬೆತ್ ಮಂದ್ ಗೆ ಪಾದಯಾತ್ರೆಯಲ್ಲಿ ಸಾಗಿದ ಕೊಡವ, ಕೊಡವತಿಯರು ಸಿಎನ್‌ಸಿ ಮಂಡಿಸಿರುವ 9 ಬೇಡಿಕೆಗಳ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆಯ ಪ್ರಮುಖ ಬೇಡಿಕೆಯನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸುತ್ತಿರುವ ಔಚಿತ್ಯದ ಕುರಿತು ಎನ್.ಯು.ನಾಚಪ್ಪ ವಿವರಿಸಿದರು.
ಕೊಡವರು ಜಾಗೃತರಾದರೆ ಮಾತ್ರ ಸಂವಿಧಾನದಡಿ ಸಿಗಬೇಕಾದ ನ್ಯಾಯಯುತ ಹಕ್ಕುಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಆದ್ದರಿಂದ ಸಿಎನ್‌ಸಿ ಯ ಶಾಂತಿಯುತ ಹೋರಾಟದೊಂದಿಗೆ ಕೈಜೋಡಿಸುವಂತೆ ಕರೆ ನೀಡಿದರು.
ಕೊಡವರ ಸ್ವಯಂ ಶಾಸನದ ಜನ್ಮ ಭೂಮಿಯನ್ನು ಕಾಯ್ದೆ ಬದ್ದವಾಗಿ ಸ್ಥಿರೀಕರಣಗೊಳಿಸಲು ಭೌಗೋಳಿಕ ರಾಜಕೀಯ ಸ್ವಾಯತ್ತತೆ ಮತ್ತು ಆಂತರಿಕ ರಾಜಕೀಯ ಸ್ವ-ನಿರ್ಣಯ ಹಕ್ಕು ಸಂವಿಧಾನದ ವಿಧಿ 244 R/w 6 ಮತ್ತು 8ನೇ ಶೆಡ್ಯೂಲ್ ಅಡಿಯಲ್ಲಿ ಕರ್ನಾಟಕದ ಸ್ವಾಧೀನದೊಳಗೆ ಆಂತರಿಕ-ರಾಜಕೀಯ ಸ್ವ- ನಿರ್ಣಯದ ಹಕ್ಕನ್ನು ಕೊಡವರಿಗೆ ಸಂಯೋಜಿಸುವ ಮೂಲಕ ಭಾರತದ ಸಂವಿಧಾನ ಪರಿಶೀಲನಾ ಆಯೋಗವು ಶಿಫಾರಸು ಮಾಡಿರುವ ವರದಿಯನ್ವಯ ಕೊಡವ ಲ್ಯಾಂಡ್ ಸ್ವಯಂ ಶಾಸನದ ಜನ್ಮ ಭೂಮಿಯನ್ನು ರಚಿಸಬೇಕು.
ಕೊಡಗಿನ ಆದಿಮಸಂಜಾತ ಕೊಡವ ಜನಾಂಗವನ್ನು ನಮ್ಮ ಸಂವಿಧಾನದ ಶೆಡ್ಯೂಲ್ ಪಟ್ಟಿಯಲ್ಲಿ ಸೇರಿಸಬೇಕು. ಸಂವಿಧಾನದಲ್ಲಿ ರೇಸ್/ಮೂಲ ವಂಶಸ್ಥ ಜನಾಂಗಕ್ಕೆ ಯಾವುದೇ ವಿಶೇಷ ಪರಿಚ್ಛೇದಗಳ ಷರತ್ತು ಇಲ್ಲದಿರುವುದರಿಂದ ಕೊಡವರನ್ನು ಎಸ್.ಟಿ ಪಟ್ಟಿಗೆ ಸೇರಿಸುವುದು ವರ್ತಮಾನದ ಅನಿವಾರ್ಯ ಅವಶ್ಯಕತೆಯಾಗಿದೆ. ಆದ್ದರಿಂದ ಕರ್ನಾಟಕದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಆದೇಶದಂತೆ, ಕೊಡವ ಜನಾಂಗದ ನ್ಯಾಯಯುತ, ಸೂಕ್ಷ÷್ಮ, ಸಮಗ್ರ ಕುಲಶಾಸ್ತç ಅಧ್ಯಯನ ಆರಂಭಿಸಬೇಕು.
ಕೊಡವ ಕಸ್ಟಮರಿ ಜನಾಂಗೀಯ ‘ಸಂಸ್ಕಾರ ಗನ್’ ಹಕ್ಕುಗಳನ್ನು ಸಿಖ್ಖರ “ಕಿರ್ಪಾನ್” ಗೆ ಸಮಾನವಾಗಿ ನಮ್ಮ ಸಂವಿಧಾನದ 25 ಮತ್ತು 26ನೇ ವಿಧಿಗಳ ಅಡಿಯಲ್ಲಿ ಕೊಡವರ “ಧಾರ್ಮಿಕ ಸಂಸ್ಕಾರ”ವೆಂದು ರಕ್ಷಿಸಬೇಕು.
ಮಾತೃ ಭಾಷೆ ಕೊಡವ ತಕ್ಕ್ ಅನ್ನು 8ನೇ ಶೆಡ್ಯೂಲ್‌ಗೆ ಸೇರಿಸುವುದು. ನಮ್ಮ ಸಂವಿಧಾನದ 347, 350, 350ಎ ಮತ್ತು 350ಬಿ ವಿಧಿಗಳ ಅಡಿಯಲ್ಲಿ ಪಠ್ಯಕ್ರಮ ಮತ್ತು ಆಡಳಿತದಲ್ಲಿ ಕೊಡವ ತಕ್ಕ್ ಅನ್ನು ಪರಿಚಯಿಸಬೇಕು. ಕೊಡವ ತಕ್ಕ್ ಅನ್ನು ರಾಜ್ಯದ 3ನೇ ಆಡಳಿತ ಭಾಷೆಯನ್ನಾಗಿ ಪರಿಗಣಿಸಬೇಕು.
ಕೊಡವ ಜಾನಪದ ಪರಂಪರೆಯನ್ನು ಯುನೆಸ್ಕೋದ ಅಮೂರ್ತ ಸಾಂಸ್ಕೃತಿಕ ಪರಂಪರೆಯ ಪಟ್ಟಿಯಲ್ಲಿ ಸೇರಿಸಬೇಕು. ಕೊಡವ ಜಾನಪದ ಪರಂಪರೆಯನ್ನು ಜೀವಂತಗೊಳಿಸಲು, ವಿಶ್ವ ಕೊಡವಾಲಜಿ (ಕೊಡವ ಶಾಸ್ತ್ರದ ಜಾಗತಿಕ ಸಂಶೋಧನಾ ಅಧ್ಯಯನ ಕೇಂದ್ರ) ಸಂಶೋಧನಾ ಕೇಂದ್ರ ಮತ್ತು ಕೊಡವ ಸುಧಾರಿತ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲು ಸರ್ಕಾರವು ನಮಗೆ ಭೂಮಿಯನ್ನು ನೀಡಬೇಕು.
ಜೀವನದಿ ಕಾವೇರಿಗೆ “ಕಾನೂನು ವ್ಯಕ್ತಿ ಸ್ಥಿತಿಯೊಂದಿಗೆ ಜೀವಂತ ಘಟಕವನ್ನು ನೀಡಬೇಕು. ಕಾವೇರಿಯು ವೇದ ಕಾಲದ 7 ಪವಿತ್ರ ನದಿಗಳಲ್ಲಿ ಒಂದಾಗಿದೆ. ಜಲದೇವತೆ ಕಾವೇರಿಯ ಜನ್ಮಸ್ಥಳವನ್ನು ಸರ್ಕಾರವು ಪೂಜ್ಯ ಭಾವನೆಯಿಂದ ಗೌರವಿಸಬೇಕು. ಯಹೂದಿ ಜನರ ಮೌಂಟ್ ಮೊರೈಯಾ ದೇವನೆಲೆ ಮಾದರಿಯಲ್ಲಿ ಕೊಡವ ಜನಾಂಗದ ಪವಿತ್ರ ತೀರ್ಥಯಾತ್ರ ಕೇಂದ್ರವಾಗಿ ತಲಕಾವೇರಿಯನ್ನು ಪರಿಗಣಿಸಬೇಕು.
1966 ರ ಹೆಲ್ಸಿಂಕಿ ನಿಯಮದ ಪ್ರಕಾರ ಕಾವೇರಿಯ ಪುಮುಖ ನೀರಿನ ಪಾಲನ್ನು ಕೊಡಗಿನಲ್ಲಿ ಬಳಸಿಕೊಳ್ಳಬೇಕು, ಕಾವೇರಿ ನೀರಿನ 740 ಟಿಎಂಸಿ ವಾರ್ಷಿಕ ಇಳುವರಿಯಲ್ಲಿ, ಕೊಡವ ನೆಲದ ಪಾಲು 200 ಟಿಎಂಸಿ ಗಿಂತ ಹೆಚ್ಚು ಆಗಿದೆ.
ನಾಲ್ನಾಡ್ ಅರಮನೆ ಮತ್ತು ಮಡಿಕೇರಿ ಕೋಟೆಯಲ್ಲಿನ ಅರಮನೆಯ ಸಂಚಿನಲ್ಲಿನ ಘಟಿಸಿದ ಅಮಾಯಕ ಕೊಡವರ ರಾಜಕೀಯ ಹತ್ಯೆಗಳ ನೆನಪಿನ ಸ್ಮಾರಕಗಳನ್ನು ಸ್ಥಾಪಿಸಬೇಕು. ಕೊಡವ ಶೌರ್ಯವನ್ನು ಪ್ರತಿಬಿಂಬಿಸುವ ಉಲುಗುಲಿ-ಸುಂಟಿಕೊಪ್ಪ ಮತ್ತು ಮುಳ್ಳುಸೋಗೆಯಲ್ಲಿ ಕೊಡವರ ಯುದ್ಧ ಸ್ಮಾರಕಗಳನ್ನು ಸ್ಥಾಪಿಸಬೇಕು. ದೇವಾಟ್ ಪರಂಟ್ ನಲ್ಲಿ ಅಂತರರಾಷ್ಟ್ರೀಯ ಕೊಡವ ನರಮೇಧದ ಸ್ಮಾರಕಗಳನ್ನು ನಮ್ಮ ಸಂವಿಧಾನದ 49 ವಿಧಿ ಅಡಿಯಲ್ಲಿ ಮತ್ತು 1964 ರ ವೆನಿಸ್ ಘೋಷಣೆ ಯಂತೆ ನಿರ್ಮಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ನಾಚಪ್ಪ ಮಂಡಿಸಿದರು.
ಕಲ್ಯಾಟಂಡ ಸುಮಿತ್ರಾ ದೇವಯ್ಯ, ಕೀಕಂಡ ಸುಶೀಲ, ನಂದಿನೆರವಂಡ ಪಾರ್ವತಿ, ತೋಲಂಡ ಮನು, ಕಲ್ಯಾಟಂಡ ಮರಿ ಚೆಂಗಪ್ಪ, ಕೊಂಡಿರ ಶಾಂತಿ ಮಂದಪ್ಪ, ಬೊಳ್ಳೆಪಂಡ ಸುನಿತಾ ಸತೀಶ್, ಕೀಕಂಡ ಕವಿತಾ ಪೂಣಚ್ಚ, ಅಪ್ಪೇರಿಯಂಡ ಗಾಯತ್ರಿ ರಘು, ಕಲ್ಯಾಟಂಡ ರಮೇಶ್ ಚೆಂಗಪ್ಪ, ಬೊಳ್ಳೆಪಂಡ ರೋಷನ್ ಉತ್ತಪ್ಪ, ಚೋಕಿರ ರೋಶನ್, ಅಪ್ಪೇರಿಯಂಡ ವಿಪಿನ್ ಸೋಮಯ್ಯ, ಕೊಂಡಿರ ಪೆಮ್ಮಯ್ಯ ಜಾಲು, ಚೋಕಿರ ಅಶೋಕ್, ಕೀಕಂಡ ಸಚಿನ್, ಕೊಂಡಿರ ಮೋಹನ್ ಚೆಂಗಪ್ಪ, ಕಲ್ಯಾಟಂಡ ಮಯ್ಯು ದೇವಯ್ಯ, ಚೋಕಿರ ಸುಧಿ ಅಪ್ಪಯ್ಯ, ಚೋಕಿರ ಮಧು(ಮೋಹನ್), ಕುಟ್ಟಂಜೆಟ್ಟೀರ ಅಜಿತ್, ನಾಯಕಂಡ ಮುತ್ತಪ್ಪ, ಕುಟ್ಟಂಜೆಟ್ಟೀರ ಅಭಿ, ಕುಟ್ಟಂಜೆಟ್ಟಿರ ಸುರೇಶ್, ಬೊಳ್ಳಪಂಡ ಹರೀಶ್, ಕಾಳೆಯಂಡ ಸಾಬ ತಿಮ್ಮಯ್ಯ, ಅರೆಯಡ ಗಿರೀಶ್, ಅಪ್ಪಚ್ಚೀರ ರಮ್ಮಿ ನಾಣಯ್ಯ, ಕಲಿಯಂಡ ಪ್ರಕಾಶ್, ಮಣವಟ್ಟಿರ ಜಗ್ಗ, ಮಣವಟ್ಟಿರ ಸ್ವರೂಪ, ಬೊಟ್ಟೋಳಂಡ ರವಿ, ಕೊಂಡಿರ ಗಣೇಶ್ ನಾಣಯ್ಯ, ಕೀಕಂಡ ಪೂಣಚ್ಚ, ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಬೊಟ್ಟೋಳಂಡ ಗಿರೀಶ್, ಕೇಟೋಳಿರ ಹರೀಶ್, ಅರೆಯಡ ರತ್ನ, ಕಂಗಂಡ ಜಾಲಿ, ಕನ್ನಂಬೀರ ಸುಧಿ, ಅಜ್ಜೆಟಿರ ಬೋಪಣ್ಣ, ಕೇಟೋಳಿರ ರಮ್ಮಿ, ಕುಂಡಿಯೊಳಂಡ ಶ್ಯಾಮ್, ಕೊಂಡಿರ ರಾಜಪ್ಪ, ಬೊಳ್ಳೆಪಂಡ ಜುಮ್ಮಾ, ಅಪ್ಪಚ್ಚಿರ ಕಟ್ಟಿ, ನಾಯಕಂಡ ಬೋಪಣ್ಣ, ಮಲೆಯಂಡ ಸುಬ್ಬಯ್ಯ, ಕುಲ್ಲೇಟಿರ ಬೇಬಾ, ಎಳ್ತಂಡ ಶಾಂತಿ ಮತ್ತಿತರರು ಪಾದಯಾತ್ರೆ ಮತ್ತು ಜಾಗೃತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
::: ನ.10 ರಂದು ಪಾದಯಾತ್ರೆ ಮುಕ್ತಾಯ :::
ನ.10 ರಂದು ಬೆಳಗ್ಗೆ 9 ಗಂಟೆಗೆ ಪಾಡಿನಾಡ್- ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮಧ್ಯಾಹ್ನ 12 ಗಂಟೆಗೆ ಕುಂಜಿಲ ಕಕ್ಕಬ್ಬೆ “ಕೆಂಜರಾಣೆ ಪಾಡಿನಾಡ್‌ಮಂದ್”ನಲ್ಲಿ ಜಾಗೃತಿ ಸಭೆಯ ಮೂಲಕ ಯಾತ್ರೆಯನ್ನು ಮುಕ್ತಾಯಗೊಳಿಸಲಾಗುವುದು ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*