ಮಡಿಕೇರಿ ನ.10 : ಟಿಪ್ಪು ಜಯಂತಿಯ ಸಂದರ್ಭ ಮೃತಪಟ್ಟ ವಿಶ್ವ ಹಿಂದೂ ಪರಿಷತ್ ನ ಪ್ರಮುಖರಾದ ದೇವಪ್ಪಂಡ ಕುಟ್ಟಪ್ಪ ಅವರ ಸ್ಮರಣಾರ್ಥ ಜಿಲ್ಲೆಯ ವಿವಿಧ ದೇವಾಲಯಗಳಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಜಾಗರಣಾ ವೇದಿಕೆಯ ಪ್ರಮುಖರು ವಿಶೇಷ ಪೂಜೆ ಸಲ್ಲಿಸಿದರು. ಮಡಿಕೇರಿ ನಗರದ ಶ್ರೀಓಂಕಾರೇಶ್ವರ ದೇವಾಲಯ, ಕುಟ್ಟಪ್ಪ ಅವರ ಹುಟ್ಟೂರಾದ ಮಾದಾಪುರದ ಶ್ರೀಗಣಪತಿ ದೇವಾಲಯ, ಕುಶಾಲನಗರದ ಶ್ರೀಗಣಪತಿ ದೇವಾಲಯ, ವಿರಾಜಪೇಟೆಯ ಬಾಲಾಂಜನೇಯ ದೇವಾಲಯ ಸೇರಿದಂತೆ ವಿವಿಧೆಡೆ ಪೂಜೆ ಸಲ್ಲಿಸಿ ಕುಟ್ಟಪ್ಪ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು. ಹಿಂದೂ ಸಂಘಟನೆಗಳ ಪ್ರಮುಖರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.










