ಮಡಿಕೇರಿ ನ.10 : ಕಕ್ಕಬ್ಬೆ ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದು, ತಕ್ಷಣ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕಕ್ಕಬ್ಬೆ ಶ್ರೀಇಗ್ಗುತ್ತಪ್ಪ ದೇವಾಲಯದ ರಸ್ತೆ ಸಂಪೂರ್ಣವಾಗಿ ಹೊಂಡ, ಗುಂಡಿಗಳಾಗಿದ್ದು, ಮಳೆಯ ಸಂದರ್ಭ ಕೆರೆಯಂತ್ತಾಗುತ್ತದೆ. ವಾಹನಗಳು, ವಿದ್ಯಾರ್ಥಿಗಳು ಹಾಗೂ ಪಾದಾಚಾರಿಗಳ ಸಂಚಾರ ಅಸಾಧ್ಯವಾಗಿದೆ. ಆದ್ದರಿಂದ ರಸ್ತೆ ಡಾಂಬರೀಕರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು ಮತ್ತು ಬೀದಿದೀಪಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿರುವ ಗ್ರಾಮಸ್ಥರು ಸಕಾಲದಲ್ಲಿ ಮೂಲಭೂತ ಸೌಲಭ್ಯ ನೀಡದಿದ್ದಲ್ಲಿ ಗ್ರಾ.ಪಂ ಗೆ ಕಂದಾಯ ಪಾವತಿ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದ್ದಾರೆ.











