ಮಡಿಕೇರಿ ನ.10 : ಹುಲಿದಾಳಿಗೆ ಸಿಲುಕಿ ಮೂರು ಆಡುಗಳು ಬಲಿಯಾಗಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾ.ಪಂ ವ್ಯಾಪ್ತಿಯ ರುದ್ರಬೀಡು ಗ್ರಾಮದಲ್ಲಿ ನಡೆದಿದೆ.
ಹೊನ್ನಿಕೊಪ್ಪಲಿನ ಎಂ.ಬಿ.ಸಣ್ಣಪ್ಪ ಎಂಬುವವರಿಗೆ ಸೇರಿದ ಆಡುಗಳು ಇದಾಗಿದ್ದು, ಮೇಯಲೆಂದು ಗದ್ದೆಯಲ್ಲಿ ಕಟ್ಟಿ ಹಾಕಿದ್ದ ಸಂದರ್ಭ ಹುಲಿ ದಾಳಿ ಮಾಡಿದೆ.
ಇಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ತಿತಿಮತಿ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕೆಲವು ದಿನಗಳ ಹಿಂದೆಯಷ್ಟೇ ಇದೇ ಪ್ರದೇಶದಲ್ಲಿ ಹುಲಿದಾಳಿಯಿಂದ ಸಾವನ್ನಪ್ಪಿದ್ದ ಕಾಡುಹಂದಿಯ ಕಳೇಬರ ಪತ್ತೆಯಾಗಿತ್ತು.










