ಮಡಿಕೇರಿ ನ.10 : ಓರ್ವ ಮಹಿಳೆ ಸೇರಿದಂತೆ ಕೆಲವರಿಂದ ನನಗೆ ಕಿರುಕುಳವಾಗುತ್ತಿದೆ ಎಂದು ಆರೋಪಿಸಿ ಇತ್ತೀಚೆಗೆ ಪಂಪಿನಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ನಗರದ ಉಕ್ಕುಡ ನಿವಾಸಿ ಸಂದೇಶ್ ಅವರ ಮನೆಗೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿದರು.
ಸಂದೇಶ್ ಅವರ ಪತ್ನಿ ಹಾಗೂ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಅವರು ಘಟನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಪಡೆದರು. ಈಗಾಗಲೇ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ ಕಾನೂನಿನ ಚೌಕಟ್ಟಿನಡಿ ಶಿಕ್ಷೆಯಾಗಲಿದೆ. ಕಾನೂನು ವ್ಯಾಪ್ತಿಯಲ್ಲಿ ನಾನು ನಿಮಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಭರವಸೆ ನೀಡಿದರು.
ಕಾಂಗ್ರೆಸ್ ನಗರಾಧ್ಯಕ್ಷ ಬಿ.ವೈ.ರಾಜೇಶ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಸ್ಥಳೀಯ ನಗರಸಭಾ ಸದಸ್ಯ ಮನ್ಸೂರ್ ಮತ್ತಿತರ ಪ್ರಮುಖರು ಈ ಸಂದರ್ಭ ಹಾಜರಿದ್ದರು.









