ಮಡಿಕೇರಿ ನ.10 : ಕಾಂಗ್ರೆಸ್ ಸೇವಾದಳದ ಶತಮಾನೋತ್ಸವ ಸಮಾರಂಭ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಹಾಗೂ ಎಐಸಿಸಿ ಸೇವಾದಳದ ರಾಷ್ಟ್ರಾಧ್ಯಕ್ಷ ಲಾಲ್ ಜಿ ದೇಸಾಯಿ ಅವರ ಉಪಸ್ಥಿತಿಯಲ್ಲಿ ನಡೆಯಿತು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯಿಂದ ಸೇವಾದಳದ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ ಅವರ ನೇತೃತ್ವದಲ್ಲಿ ಪ್ರಮುಖರಾದ ತೆರೆಸಾ ವಿಕ್ಟರ್, ರಾಜ್ಯ ಕಾರ್ಯದರ್ಶಿ ದಾಮೋದರ್, ಸದಸ್ಯ ಸಣ್ಣುವಂಡ ಕಾವೇರಪ್ಪ, ಜಿಲ್ಲಾ ಉಪಾಧ್ಯಕ್ಷರಾದ ಪಾಂಡನ ಪುಷ್ಪವೇಣಿ, ಅನೀಸ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಹಭಿಬ್ ಅಹಮ್ಮದ್, ಕಾರ್ಯದರ್ಶಿ ರವೀನಾ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಹಯಾತ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಬಸವರಾಜು, ಕುಶಾಲನಗರ ಬ್ಲಾಕ್ ಅಧ್ಯಕ್ಷ ಸಾಹುಲ್ ಹಮೀದ್, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ರಾಜಶೇಖರ್, ವಿರಾಜಪೇಟೆ ಬ್ಲಾಕ್ ಅಧ್ಯಕ್ಷ ಹರೀಶ್, ನಾಪೋಕ್ಲು ಅಧ್ಯಕ್ಷ ಪಿಯೂಷ್ ಪೆರೇರ, ನಗರ ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಪ್ರೇಮ ಕೃಷ್ಣಪ್ಪ, ಶೇಕ್ ಅಹಮ್ಮದ್ ಮತ್ತಿತರರು ಪಾಲ್ಗೊಂಡಿದ್ದರು.









