ಮಡಿಕೇರಿ ನ.11 : ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ಮಡಿಕೇರಿ ತಾಲ್ಲೂಕು, ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ನ.14 ರಂದು ಸಂಜೆ 05.30 ಗಂಟೆಗೆ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ “ಗೋಪೂಜೆ” ಕಾರ್ಯಕ್ರಮ ಏರ್ಪಡಿಸಲಾಗಿದೆ.
ಆದ್ದರಿಂದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ “ಗೋಪೂಜೆ” ಕಾರ್ಯಕ್ರಮಕ್ಕೆ ಆಗಮಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಶ್ರೀ ಭಗಂಡೇಶ್ವರ-ತಲಕಾವೇರಿ ಮತ್ತು ಸಮೂಹ ದೇವಾಲಯಗಳ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.









