ಮಡಿಕೇರಿ ನ.11 : ಕುಶಾಲನಗರ- ಚಂದ್ರಯಾನ 3 ಯಶಸ್ಸಿನ ಸಂಭ್ರಮಾಚರಣೆಯ ಪ್ರಯುಕ್ತ ಕೊಡಗಿನ ಸೈನಿಕ ಶಾಲೆಯಲ್ಲಿ ಚಂದ್ರಯಾನ-3 ರ ಯಶಸ್ಸಿನ ಸಂಭ್ರಮಾಚರಣೆ ನಡೆಯಿತು.
ವಿದ್ಯಾರ್ಥಿಗಳಿಗೆ ಸಂಭ್ರಮಾಚರಣೆ ಪ್ರಯುಕ್ತ ‘ತಿರಂಗ’ ಎಂಬ ವಿಷಯವನ್ನಾಧರಿಸಿ ಕವನ ಬರೆಯುವ ಸ್ಪರ್ಧೆ ನಡೆಯಿತು. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭ ಶಾಲೆಯ ಪ್ರಾಂಶುಪಾಲರು ಮಾತನಾಡಿ, ಶಾಲೆಯ ಯುವ ವಿದ್ಯಾರ್ಥಿಗಳ ಮನಸ್ಸುಗಳಲ್ಲಿ ದೇಶಪ್ರೇಮವನ್ನು ತುಂಬುವ ಮೂಲಕ ತಮ್ಮ ದೇಶಭಕ್ತಿಯ ಮನೋಭಾವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದರು.








