ಮಡಿಕೇರಿ ನ.11 : ಕೊಡಗು ಹಿತರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ, ರಾಷ್ಟ್ರ ಕವಿ ಕುವೆಂಪು ಅವರ ಪುಣ್ಯಸ್ಮರಣೆ ಆಚರಿಸಲಾಯಿತು.
ನಗರದ ವಿಶ್ವ ಮಾನವ ಉದ್ಯಾನವನದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಪುತ್ಥಳಿಗೆ ವೇದಿಕೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು.
ಯುಗದ ಕವಿ, ಜಗದ ಕವಿ ಕುವೆಂಪು ರವರು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವುದರ ಜೊತೆಗೆ ತಮ್ಮ ವಿಶ್ವಮಾನವ ಸಂದೇಶಗಳ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಸಾರಿದ್ದಾರೆ ಎಂದು ವೇದಿಕೆಯ ಪ್ರಮುಖರು ಸ್ಮರಿಸಿದರು.
ಹಿತರಕ್ಷಣಾ ವೇದಿಕೆಯ ಗೌರವ ಅಧ್ಯಕ್ಷ ಖಲೀಲ್ ಭಾಷಾ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು.
ಈ ಸಂದರ್ಭ ಕೊಡಗು ಹಿತರಕ್ಷಣಾ ವೇದಿಕೆ ಅಧ್ಯಕ್ಷ ರವಿಗೌಡ, ವಿಷ್ಣುಸೇನಾ ಜಿಲ್ಲಾಧ್ಯಕ್ಷ ರಫೀಕ್ ದಾದಾ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಮುನೀರ್ ಮಾಚರ್, ವೀರಭದ್ರ ಮುನೀಶ್ವರ ದೇವಾಲಯದ ಗೌರವಾಧ್ಯಕ್ಷ ಪಿ.ಜಿ.ಮಂಜುನಾಥ್, ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರುಗಳಾದ ಪುನೀತ್, ಪ್ರದೀಪ್, ಕಿರಣ್ ಹಾಗೂ ಮತ್ತಿತರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.








