ಮಡಿಕೇರಿ ನ.11 : ಮೇಕೇರಿ ಸ್ವಾಗತ ಯುವಕ ಸಂಘದ ನೇತೃತ್ವದಲ್ಲಿ ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ದಂತ ತಪಾಸಣೆ ನಡೆಯಿತು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ದಂತ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ.ದೀಪಾ ಮಕ್ಕಳ ದಂತ ತಪಾಸಣೆ ನಡೆಸಿದರು.
ಹಲ್ಲಿನ ಮಹತ್ವ , ಉಂಟಾಗಬಹದಾದ ಸಮಸ್ಯೆಗಳು, ಬ್ರಶ್ ಮಾಡುವ ವಿಧಾನಗಳ ಕುರಿತು ವಿದ್ಯಾರ್ಥಿಗಳಿಗೆ ವೈದ್ಯರು ಮಾಹಿತಿ ನೀಡಿದರು. ಹಲ್ಲಿನ ಗಂಭೀರ ಸಮಸ್ಯೆಯಿರುವ ವಿದ್ಯಾರ್ಥಿಗಳನ್ನು ಜಿಲ್ಲಾಸ್ಪತ್ರೆಗೆ ಕರೆ ತರುವಂತೆ ತಿಳಿಸಲಾಯಿತು.
ಮೇಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಂತ ತಪಾಸಣಾ ಶಿಬಿರದ ಪ್ರಯೋಜನ ಪಡೆದುಕೊಂಡರು.
ಶಿಬಿರದಲ್ಲಿ ಸ್ವಾಗತ ಯುವಕ ಸಂಘದ ಅಧ್ಯಕ್ಷ ಟಿ.ಎನ್.ಉಮೇಶ್, ಕಾರ್ಯದರ್ಶಿ ಪವನ್, ಖಜಾಂಚಿ ಭವನ್, ಕಾರ್ಯಕಾರಿ ಸಮಿತಿ ಸದಸ್ಯ ಲತೀ, ಗ್ರಾ.ಪಂ. ಸದಸ್ಯರಾದ ಸುಶೀಲಾ ಮಧು, ಶಾಲಾ ಮುಖ್ಯೋಪಾಧ್ಯಾಯರಾದ ಸಬಿತ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.
ದಂತ ತಪಾಸಣೆಯ ನಂತರ ಶಾಲಾ ಮಕ್ಕಳಿಗೆ ಟೂತ್ ಬ್ರಶ್ ಹಾಗೂ ಟೂತ್ ಪೇಸ್ಟ್ ಅನ್ನು ಉಚಿತವಾಗಿ ನೀಡಲಾಯಿತು.












